
ಬೆಳಗಾವಿ : ಆ ಯುವತಿಗೆ ಮದುವೆಯಾಗಿತ್ತು. ಆದರೂ ಕೂಡ ಬೇರೆ ಯುವಕನೊಂದಿಗೆ. ಅಕ್ರಮ ಸಂಬಂಧ ಹೊಂದಿದ್ದಳು. ಈ ವೇಳೆ ಅಕ್ರಮ ಸಂಬಂಧ ಹೊಂದಿದ್ದ ಯುವಕ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಈಕೆಯ ಫೋಟೋ ಹಾಕಿದ್ದಾನೆ. ಅಕ್ರಮ ಸಂಬಂಧ ಬಯಲಾದ.
ಹಿನ್ನೆಲೆ, ಮನನೊಂದ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಈ ಒಂದು ಘಟನೆಯ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಆರತಿ ಕಾಂಬಳೆ (26) ಎಂದು ತಿಳಿದುಬಂದಿದೆ. ಈಕೆ ಮದುವಯಾಗಿ ರಾಯಭಾಗ್ ತಾಲೂಕಿನ ಮೊರಬ ಗ್ರಾಮದಲ್ಲಿ ಗಂಡನ ಮನೆಯಲ್ಲಿ ವಾಸಿಸುತ್ತಿದ್ದಳು. ಆರತಿಗೆ ಮದುವೆ ಆಗಿದ್ದರೂ ಇನ್ನೊಬ್ಬನ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರು. ಆರತಿ ಜೊತೆ ಸ್ನೇಹ ಬೆಳೆಸಿದ್ದ ಸಾಗರ ರಾಂಬಳೆ ತನ್ನ ವಾಟ್ಸಪ್ ಸ್ಟೇಟಸ್‌ನಲ್ಲಿ ಆರತಿಯ ಫೋಟೋ ಹಾಕಿದ್ದಾನೆ. ಸಾಗರ ವಾಟ್ಸಪ್ ಸ್ಟೇಟಸ್‌ನಲ್ಲಿ ಆರತಿ ಫೋಟೋ ಹಾಕಿದ್ದು ಫುಲ್ ವೈರಲ್ ಆಗಿತ್ತು.




ಅಕ್ರಮ ಸಂಬಂಧ ಬಯಲಾದ ಹಿನ್ನಲೆ ಮನನೊಂದು ಇಂದು ಆರತಿ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ಸಂಬಂಧಿಕರ ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ರಾಯಭಾಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ.

