Home ಕರಾವಳಿ ಉಪ್ಪಿನಂಗಡಿ: ನಿರ್ಮಾಣ ಹಂತದ ಕಟ್ಟಡದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

ಉಪ್ಪಿನಂಗಡಿ: ನಿರ್ಮಾಣ ಹಂತದ ಕಟ್ಟಡದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

0

ಉಪ್ಪಿನಂಗಡಿ:  ಬಸ್ ನಿಲ್ದಾಣ ಬಳಿಯಿರುವ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ವ್ಯಕ್ತಿಯೊಬ್ಬರ ಶವ ಕಂಬಳಿ ಹೊದ್ದು ಮಲಗಿದ ರೀತಿಯಲ್ಲಿ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.


ಅಪರಿಚಿತ ವ್ಯಕ್ತಿಯ ಮೃತದೇಹ ಇದಾಗಿದ್ದು ಸುಮಾರು 45 ವರ್ಷ ಪ್ರಾಯದ ಈ ವ್ಯಕ್ತಿಯ ತಲೆಗೆ ಕಲ್ಲು ಅಥವಾ ಆಯುಧದಿಂದ ಹೊಡೆದು ಕೊಲೆ ನಡೆಸಿದಂತೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಮೃತದೇಹದ ಸ್ವಲ್ಪ ದೂರದಲ್ಲಿ ಸಿಮ್ ತೆಗೆದ ಮೊಬೈಲ್ ಒಂದು ಪತ್ತೆಯಾಗಿದೆ.

ಉಪ್ಪಿನಂಗಡಿ ಗ್ರಾ.ಪಂ. ಗೆ ಸೇರಿದ್ದು, ಗ್ರಂಥಾಲಯ ನಿರ್ಮಾಣಕ್ಕಾಗಿ ಕಟ್ಟಡ ಕಾಮಗಾರಿ ನಡೆಯುತ್ತಿತ್ತು. ಕೆಲಸಗಾರರು ಕೆಲಸಕ್ಕೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ನಡೆಸಿ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here