Home ಕರಾವಳಿ ಮಂಗಳೂರು: ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಗೆ ಬೆಂಕಿ

ಮಂಗಳೂರು: ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಗೆ ಬೆಂಕಿ

0

ಮಂಗಳೂರು: ಮನೆಯಲ್ಲಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ನಗರದ ಅತ್ತಾವರದಲ್ಲಿ ಶುಕ್ರವಾರ(ಡಿ.6) ನಡೆದಿದೆ.


ಮನೆ ಮಂದಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ನ ರೇಗ್ಯುಲೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಮನೆಮಂದಿ ಮನೆಯಿಂದ ಹೊರ ಓಡಿ ಬಂದಿದ್ದಾರೆ.

ಬಳಿಕ ಪಾಂಡೇಶ್ವರ ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.

LEAVE A REPLY

Please enter your comment!
Please enter your name here