Home ತಾಜಾ ಸುದ್ದಿ ಪ್ರವಾಸಕ್ಕೆಂದು ಬಂದು ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ..!!

ಪ್ರವಾಸಕ್ಕೆಂದು ಬಂದು ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ..!!

0

ಕಾರವಾರ : ಶೈಕ್ಷಣಿಕ ಪ್ರವಾಸಕ್ಕೆಂದು ಬಂದು ಮುರುಡೇಶ್ವರದಲ್ಲಿ ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆಯಾಗಿವೆ. ಕರಾವಳಿ ಕಾವಲುಪಡೆ ತಂಡ ವಿದ್ಯಾರ್ಥಿನಿಯರ ಮೃತದೇಹಗಳನ್ನು ಹೊರಕ್ಕೆ ತೆಗೆದಿವೆ.


ದೀಕ್ಷಾ (15), ಲಾವಣ್ಯ (15) ಹಾಗೂ ವಂದನಾ (15) ಮೃತದೇಹವನ್ನು ಬೋಟ್ ಮೂಲಕ ದಡಕ್ಕೆ ತರಲಾಯಿತು. ಡಿ. 10ರಂದು 7 ವಿದ್ಯಾರ್ಥಿನಿಯರು ಸಮುದ್ರಪಾಲಾಗಿದ್ದು, ಈ ಪೈಕಿ ಮೂವರು ವಿದ್ಯಾರ್ಥಿನಿಯರನ್ನು ಲೈಫ್ ಗಾರ್ಡ್ಸ್ ಸಿಬ್ಬಂದಿ ರಕ್ಷಿಸಿದ್ದರು.

ಇನ್ನುಳಿದ ನಾಲ್ವರು ವಿದ್ಯಾರ್ಥಿನಿಯ ಪೈಕಿ ಶ್ರಾವಂತಿ ಎಂಬಾಕೆಯ ಮೃತದೇಹ ಮಂಗಳವಾರವೇ ಪತ್ತೆಯಾಗಿದ್ದು, ಉಳಿದ ಮೂವರು ನೀರಿನಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದರು.

ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ ಒಟ್ಟು 57 ಮಂದಿ ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದರು. ಮಂಗಳವಾರ ಸಂಜೆ ಮುರ್ಡೇಶ್ವರ ಕಡಲ ತೀರದಲ್ಲಿ ವಿದ್ಯಾರ್ಥಿಗಳು ಆಟವಾಡುತ್ತಿದ್ದರು. ಈ ವೇಳೆ ಏಕಾಏಕಿ ವಿದ್ಯಾರ್ಥಿನಿಯರು ಸಮುದ್ರದ ಅಲೆಗೆ ಕೊಚ್ಚಿ ಹೋಗಿದ್ದಾರೆ. ಇನ್ನು ಶಿಕ್ಷಕರು ಹಾಗೂ ಪ್ರವಾಸೋದ್ಯಮ ಇಲಾಖೆಯವರ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ.

LEAVE A REPLY

Please enter your comment!
Please enter your name here