ಉಡುಪಿ: ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿರುವ ಬಗ್ಗೆ ಬಜಗೋಳಿಯ ಹರೀಶ್ ನೀಡಿದ ದೂರಿನಂತೆ ವಿಜಯಪುರದ ಮತಿನ್ ಕುಮಾರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಪುರ ಜಿಲ್ಲಾಧಿಕಾರಿ ಕಚೇರಿಯ ಬಳಿ ಡಿ.12ರಂದು ಭೀಮ್ ಆರ್ಮಿ ಸಂಘಟನೆಯ ಮತಿನ್ ಕುಮಾರ್ ಪೇಜಾವರ ಸ್ವಾಮೀಜಿ ವಿರುದ್ಧ ಅವಾಚ್ಯ ಶಬ್ದಗಳಿಂದ ಬೈದಿರುವ ವಿಡಿಯೋ ವೈರಲ್ ಆಗಿದ್ದು, ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ದೂರಿನಲ್ಲಿ ತಿಳಿಸಲಾಗಿದೆ.