Home ತಾಜಾ ಸುದ್ದಿ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನಿಧನ

ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನಿಧನ

0

ಕಾರವಾರ: ಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತ ಪರಿಸರ ಪ್ರೇಮಿ ‘ತುಳಸಿಗೌಡ’ (86) ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಳಸಿಗೌಡ’ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.


ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಾಳಿ ಗ್ರಾಮದವರಾದ ತುಳಸಿ ಗೌಡ ಅವರು ಹಾಲಕ್ಕಿ ಬುಡಕಟ್ಟು ಜನಾಂಗಕ್ಕೆ ಸೇರಿದ್ದಾರೆ. 30 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಟ್ಟಿರುವ ಅವರ ಕೆಲಸವನ್ನು ಕೊಂಡಾಡಿ ಭಾರತ ಸರ್ಕಾರವು 2021ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಹಾಲಕ್ಕಿ ಸಮುದಾಯದ ಜಾನಪದ ಕಲಾವಿದೆ, ಪದ್ಮಶ್ರೀ ಸುಕ್ರಿ ಬೊಮ್ಮು ಗೌಡ ಅವರ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ತನ್ನದೇ ವಿಶಿಷ್ಠ ಸಾಧನೆಯ ಮೂಲಕ ಗಮನ ಸೆಳೆಯುತ್ತಿರುವ ಮತ್ತೋರ್ವ ಮಹಿಳಾ ಸಾಧಕಿ ತುಳಸಿ ಗೌಡ.ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತುಳಸಿ ಗೌಡರ ಸಾಧನೆ ಅಪಾರ. ವೃಕ್ಷಮಾತೆ ಎಂದೆನಿಸಿಕೊಂಡಿರುವ ಈಕೆ ಬೆಳೆಸಿದ ಮರಗಳು ಒಂದಲ್ಲಾ, ಎರಡಲ್ಲಾ ಲಕ್ಷಗಟ್ಟಲೇ! ಇವರು ಕಟ್ಟಿಗೆ ಸಂಗ್ರಹಿಸಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು.

ಬಾಲ್ಯವಿವಾಹವಾದ ತುಳಸಿ ಸಹ ಚಿಕ್ಕವಯಸ್ಸಿನಲ್ಲಿಯೇ ಗಂಡನನ್ನು ಕಳೆದುಕೊಂಡು ವಿಧವೆಯಾದರು. ಪರಿಸರ ಪ್ರೇಮ ಎನ್ನುವುದು ಈಕೆಗೆ ಹುಟ್ಟಿನಿಂದ ಬಂದಿತ್ತು. ಊರಿನವರ ಜೊತೆ ಸೌದೆ ತರುವ ಕೆಲಸವನ್ನು ಮಾಡಿ ಪ್ರತಿನಿತ್ಯ ಐದರಿಂದ ಆರು ರೂಪಾಯಿ ದುಡಿಯುತ್ತಿದ್ದರು.

LEAVE A REPLY

Please enter your comment!
Please enter your name here