ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಕಾರ್ಕಳದಿಂದ ಮೂಡುಬಿದ್ರಿ ಮಾರ್ಗವಾಗಿ ಮಂಗಳೂರಿಗೆ ಪ್ರಯಾಣ ಆರಂಭಿಸಿದ ರಾಜ್ಯ ರಸ್ತೆ ಸಾರಿಗೆಯ ಬಸ್,ಗಳಿಗೆ ಬಂಡಿಮಠ ಬಸ್ ನಿಲ್ದಾಣದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೂಜೆ ಸಲ್ಲಿಸಿ ಪ್ರಯಾಣಕ್ಕೆ ಶುಭ ಹಾರೈಸಲಾಯಿತು.
ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಸಂಪ್ರದಾಯದಂತೆ ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸಿದ ನಂತರ ಮಾತನಾಡುತ್ತಾ ರಾಜ್ಯ ಸರ್ಕಾರದ ಪಂಚ ಗ್ಯಾರೆಂಟಿಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯೂ ಒಂದಾಗಿದೆ. ರಾಜ್ಯ ಸರ್ಕಾರವು ನುಡಿದಂತೆ ನಡೆಯುತ್ತಿದ್ದು ಕಾರ್ಕಳ ಮಂಗಳೂರು ಭಾಗದಲ್ಲಿಯೂ ಶಕ್ತಿ ಯೋಜನೆಯಡಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕಾರ್ಕಳ ಜನತೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸಿದರು.
ಕಾರ್ಕಳ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಅಜಿತ್ ಹೆಗ್ಡೆ ಮಾತನಾಡಿ ಉಚಿತ ಪ್ರಯಾಣದ ಶಕ್ತಿ ಯೋಜನೆಯಿಂದ ಮಹಿಳೆಯರು, ವಿದ್ಯಾರ್ಥಿನಿಯರಿಗೆ ತುಂಬಾ ಉಪಯೋಗವಾಗುತ್ತಿದ್ದ ಕಾರ್ಕಳ ಮಂಗಳೂರು ಬಸ್ ಸಂಚಾರದಿಂದ ಈ ಭಾಗದ ಜನರು ಇದರ ಪ್ರಯೋಜನ ಪಡೆಯುವಂತಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪುರಸಭಾ ಸದಸ್ಯರಾದ ಶುಭದ್ ರಾವ್, ಮಾಜಿ ಪುರಸಭಾ ಅಧ್ಯಕ್ಷರಾದ ಸುಭಿತ್.ಎನ್.ಆರ್, ಪ್ರಭಾಕರ ಬಂಗೇರ, ನಗರ ಕಾಂಗ್ರೆಸ್ ಅಧ್ಯಕ್ಷರಾದ ರಾಜೇಂದ್ರ ದೇವಾಡಿಗ, ಕೆ.ಎಮ್.ಎಪ್ ನಿರ್ದೇಶಕರಾದ ಸುಧಾಕರ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಭಾನು ಭಾಸ್ಕರ್, ಪ್ರಕಾಶ್ ಪೂಜಾರಿ, ಯೋಗೀಶ್ ಇನ್ನಾ, ಪ್ರದೀಪ್ ಬೇಲಾಡಿ, ಹೇಮಂತ್ ಆಚಾರ್ಯ, ದಿನಕರ ಶೆಟ್ಟಿ, ಸುರೇಶ್ ಆಚಾರ್ಯ, ರಂಜಿತ್ ಸಿಟಿ, ದಿವಾಕರ ಶೆಟ್ಟಿ, ರಾಮ ಶೆಟ್ಟಿ, ಹಾಗೂ ಚುನಾಯಿತ ಪ್ರತಿನಿಧಿಗಳು, ಗ್ಯಾರಂಟಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.