Home ಕರಾವಳಿ ಮಂಗಳೂರು: ಕ್ರೇನ್ ಪಲ್ಟಿ – ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

ಮಂಗಳೂರು: ಕ್ರೇನ್ ಪಲ್ಟಿ – ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

0

ಮಂಗಳೂರು ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ವಿಮಾನ ನಿಲ್ದಾಣದ ಸರಹದ್ದಿನಲ್ಲಿ ಕಾಮಗಾರಿ ನಡೆಸಿ ತೆರಳುತ್ತಿದ್ದ ಬೃಹತ್ ಕ್ರೇನೊಂದು ಪಲ್ಟಿಯಾಗಿ ಉರುಳಿದ ಘಟನೆ ಕೆಂಜಾರು ವಿಮಾನ ನಿಲ್ದಾಣದ ನಿರ್ಗಮನ ರಸ್ತೆಯ ಬಳಿ ಸಂಭವಿಸಿದೆ.


 ಕ್ರೇನ್ ಪಲ್ಟಿಯಾಗಿ ಕ್ರೇನ್ ಆಪರೇಟರ್ ಪ್ರಾಣ ಕಳೆದುಕೊಂಡಿದ್ದಾನೆ.

ಮೃತರನ್ನು ಉತ್ತರ ಪ್ರದೇಶದ ಕ್ರೇನ್ ಆಪರೇಟರ್ ಅರುಣ್ ಕುಮಾರ್ ಜಾಧವ್ ಎಂದು ಗುರುತಿಸಲಾಗಿದೆ.

ಕ್ರೇನ್ ಅದ್ಯಪಾಡಿಯಿಂದ ಕೆಂಜಾರ್ ಜಂಕ್ಷನ್ ಕಡೆಗೆ ವಿಮಾನ ನಿಲ್ದಾಣದ ನಿರ್ಗಮನ ಮಾರ್ಗವಾಗಿ ತೆರಳುತ್ತಿತ್ತು. ರಸ್ತೆಯ ಇಳಿಜಾರಿನ ಭಾಗದಲ್ಲಿ ವಾಹನ ನಿಯಂತ್ರಣ ಕಳೆದುಕೊಂಡು 20 ಅಡಿ ಆಳದ ಕಂದಕಕ್ಕೆ ಉರುಳಿದೆ ಎನ್ನಲಾಗಿದೆ.

ಕ್ರೇನ್ ಅಡಿಗೆ ಸಿಲುಕಿಕೊಂಡ ಆಪರೇಟರ್ ಅನ್ನು ಮೇಲೆಕ್ಕೆತ್ತಲು ಸುಮಾರು ಅರ್ಧ ತಾಸು ಕಾರ್ಯಾಚರಣೆ ಮಾಡಲಾಗಿದೆ. ಇನ್ನೊಂದು ಕ್ರೇನ್ ಮೂಲಕ ಮೇಲಕ್ಕೆತ್ತಿ ಅದರಡಿಗೆ ಸಿಲುಕಿಕೊಂಡ ಅಪರೇಟರ್ ಅನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಯಿತು.

ಘಟನೆಯಲ್ಲಿ ಅರುಣ್ ಕುಮಾರ್ ಅವರಿಗೆ ತೀವ್ರ ಗಾಯಗಳಾಗಿವೆ. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಅರುಣ್ ಕುಮಾರ್ ಸಾವನ್ನಪ್ಪಿದ್ದಾರೆ

LEAVE A REPLY

Please enter your comment!
Please enter your name here