Home ಕರಾವಳಿ ಮಂಗಳೂರು: ಖ್ಯಾತ ನೃತ್ಯ ಗುರು ಕಮಲಾ ಭಟ್ ನಿಧನ

ಮಂಗಳೂರು: ಖ್ಯಾತ ನೃತ್ಯ ಗುರು ಕಮಲಾ ಭಟ್ ನಿಧನ

0

ಮಂಗಳೂರು: ಖ್ಯಾತ ನೃತ್ಯ ಗುರು ಕರ್ನಾಟಕ ಕಲಾಶ್ರೀ ಪುರಸ್ಕೃತ ಕಮಲಾ ಭಟ್ ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.


ನಾಟ್ಯಾಲಯ ಊರ್ವ ಸಂಸ್ಥೆಯ ನಿರ್ದೇಶಕರಾಗಿದ್ದ ಕಮಲಾಭಟ್ ಅವರು ಸುಮಾರು 45 ವರ್ಷಗಳಿಂದ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದರು.

ಕಮಲಾ ಭಟ್ ಅವರಿಗೆ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಕರ್ನಾಟಕ ಕಲಾ ಶ್ರೀ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಉಡುಪಿ ಪೇಜಾವರ ಮಠದ ಪ್ರಶಸ್ತಿ ಸಹಿತ ಅನೇಕ ಪ್ರಶಸ್ತಿಗಳು ಲಭಿಸಿವೆ.

ರಾಜ್ಯದ ಪ್ರತಿಷ್ಠಿತ ವೇದಿಕೆಗಳಲ್ಲಿ ನೃತ್ಯ ಕಾರ್ಯಕ್ರಮಗಳ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದ ಕಮಲಾ ಭಟ್ ಅವರು ಉಳ್ಳಾಲ ಮೋಹನ್ ಕುಮಾರರ ಶಿಷ್ಯೆ.

LEAVE A REPLY

Please enter your comment!
Please enter your name here