Home ಕರಾವಳಿ ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ಕರಾವಳಿ ದರ್ಶನ

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ಕರಾವಳಿ ದರ್ಶನ

0

ಮಂಗಳೂರು: ಈ ವರ್ಷದ ಕರಾವಳಿ ಉತ್ಸವವನ್ನು ರಮಣೀಯವನ್ನಾಗಿಸಲು ಇದೇ ಮೊದಲ ಬಾರಿಗೆ ಹೆಲಿಕಾಫ್ಟರ್‍ನಲ್ಲಿ ಕರಾವಳಿಯ ಸೊಬಗನ್ನು ಸವಿಯುವ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ

ಡಿಸೆಂಬರ್ 21ರಿಂದ 29 ರವರೆಗೆ ನಗರದ ಮೇರಿಹಿಲ್ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಪ್ರಯಾಣ ಪ್ರಾರಂಭವಾಗಲಿದೆ. ಸಾರ್ವಜನಿಕರು ನಗರ ದರ್ಶನ ಮತ್ತು ಕಡಲ ಕಿನಾರೆಯ ಸೌಂದರ್ಯವನ್ನು ಸವಿಯಲು ಸಿದ್ಧತೆ ಮಾಡಲಾಗಿದೆ.

ಹೆಲಿಕಾಪ್ಟರ್ ಪ್ರಯಾಣದ ಪ್ರತಿ ಟ್ರಿಪ್‍ನಲ್ಲಿ 6 ಜನರಿಗೆ ಸಂಚರಿಸಲು ಅವಕಾಶವಿದ್ದು, ಪ್ರತಿ ವ್ಯಕ್ತಿಗೆ ರೂ. 4,500/- ದರ ನಿಗದಿಪಡಿಸಲಾಗಿದೆ.ಹೆಲಿಕಾಫ್ಟರ್‍ನಲ್ಲಿ ಸಂಚರಿಸಲು ಆಸಕ್ತರು ಬುಕ್ಕಿಂಗ್‍ಗಾಗಿ ವೆಬ್‍ಸೈಟ್ www.helitaxii.com ,(ಮೊಬೈಲ್ ಸಂಖ್ಯೆ:- 9400399999,7483432752) ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here