Home ಕರಾವಳಿ ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ಹಣ ನೀಡಲು ಸರಕಾರ ಆದೇಶ

ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ಹಣ ನೀಡಲು ಸರಕಾರ ಆದೇಶ

0

ರಾಜ್ಯ ಕಾಂಗ್ರೆಸ್ ಸರಕಾರ ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂಪಾಯಿ ನೀಡಲು ಆದೇಶ ಹೊರಡಿಸಿದೆ. ಆ ಮೂಲಕ ನಾಡಿನ ಕಂಬಳ ಪ್ರಿಯರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.


ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲೂ ಕಂಬಳಕ್ಕೆ ಅನುದಾನ ನೀಡುವಂತೆ ಕೋರಿ ಕರಾವಳಿಯ ಶಾಸಕರು ಬೇಡಿಕೆ ಸಲ್ಲಿಸಿದ್ದರು. ಸ್ವತಃ ಸ್ಪೀಕರ್ ಯು.ಟಿ. ಖಾದರ್ ಕೂಡ ಕಂಬಳ ಪರ ಬ್ಯಾಟಿಂಗ್ ಮಾಡಿದ್ದರು. ಅಲ್ಲದೆ, ಸರ್ಕಾರ ನೆರವು ಕೊಡದಿದ್ದರೆ ನಾವೇ ಹಣ ಸಂಗ್ರಹಿಸಿ ಕಂಬಳ ಮಾಡಲು ಗೊತ್ತು ಎಂದೂ ಚಾಟಿ ಬೀಸಿದ್ದರು. ಯು.ಟಿ.ಖಾದರ್ ಚಾಟಿ ಬೀಸಿದ ಬೆನ್ನಲ್ಲೇ ಸರಕಾರ ಕಂಬಳಕ್ಕೆ ಅನುದಾನ ಬಿಡುಗಡೆಗೆ ಆದೇಶ ಮಾಡಿದೆ. ಮುಖ್ಯಮಂತ್ರಿಗಳ ಶಿಫಾರಸ್ಸಿನ ಮೇರೆಗೆ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕಂಬಳ ಸಮಿತಿಯ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ, ಕಳೆದ ವರ್ಷ ಕಂಬಳಕ್ಕೆ ರಾಜ್ಯ ಸರ್ಕಾರ ಅನುದಾನ ನೀಡಿರಲಿಲ್ಲ. ಇದು ಕಂಬಳ ಪ್ರಿಯರಿಗೆ ಬೇಸರ ತರಿಸಿತ್ತು. 2024- 25ನೇ ಸಾಲಿನ 24 ಜೋಡುಕರೆ ಕಂಬಳಗಳಿಗೆ ಸರಕಾರ ತಲಾ 5 ಲಕ್ಷ ರೂ. ಘೋಷಿಸಿದೆ. ಇದು ಕಂಬಳ ಪ್ರಿಯರಿಗೆ ಹರ್ಷ ತಂದಿದೆ ಎಂದರು. 2020- 21ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ 10 ಕಂಬಳಗಳಿಗೆ ತಲಾ 5 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿತ್ತು. ಅಲ್ಲದೆ, ಉಡುಪಿ ಜಿಲ್ಲೆಯಲ್ಲಿ ನಡೆಯುವ 53 ಸಾಂಪ್ರದಾಯಿಕ ಕಂಬಳಗಳಿಗೂ ಅನುದಾನ ಕೋರಲಾಗಿತ್ತು. ಆದರೆ, ಕಳೆದ ವರ್ಷ ಸರಕಾರ 50 ಲಕ್ಷ ಘೋಷಿಸಿ ಅನುದಾನ ನೀಡಿರಲಿಲ್ಲ. ಘೋಷಣೆಯಾದ 50 ಲಕ್ಷ ಬಿಡುಗಡೆ ಮಾಡಬೇಕು. ಅದಲ್ಲದೆ, ಸಾಂಪ್ರದಾಯಿಕ ಕಂಬಳಗಳಿಗೂ 50 ಲಕ್ಷ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

LEAVE A REPLY

Please enter your comment!
Please enter your name here