ಪುತ್ತೂರು: ನಾಯಿ ಅಡ್ಡ ಬಂದ ಪರಿಣಾಮ ಆಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಪುತ್ತೂರು ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ನಡೆದಿದೆ.
ಮೃತಪಟ್ಟ ಆಟೋ ಚಾಲಕ ಬೊಳ್ವಾರ್ ನಿವಾಸಿ ಸೂರ್ಯ ಎಂದು ಗುರುತಿಸಲಾಗಿದೆ.
ಇಂದು ಮುಂಜಾನೆ ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ನಾಯಿ ಅಡ್ಡ ಬಂದು ಅವರ ಎಲೆಕ್ನಿಕ್ ಆಟೋ ಪಲ್ಟಿಯಾಗಿತ್ತು ಗಂಭೀರ ಗಾಯಗೊಂಡ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.