ಕ್ರಿಸ್ಮಸ್ ಹಬ್ಬದ ಸಡಗರದಲ್ಲಿ ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ್ ಗ್ರ್ಯಾಂಡ್ ಆಗಿ ತೆರೆಗೆ ಅಪ್ಪಳಿಸಿದೆ. ಇಂದು ಬೆಳಗ್ಗೆ 7 ಗಂಟೆಗೆ ರಾಜ್ಯದ 250ಕ್ಕೂ ಹೆಚ್ಚು ಸಿನಿಮಾ ಮಂದಿರಗಳಲ್ಲಿ ಏಕಕಾಲಕ್ಕೆ ರಿಲೀಸ್ ಆಗಿದೆ. ಹೌದು, ಬರೋಬ್ಬರಿ ಎರಡೂವರೆ ವರ್ಷಗಳ ಬಳಿಕ ತೆರೆ ಮೇಲೆ ಕಿಚ್ಚನ ಕಣ್ತುಂಬಿಕೊಂಡು ಫ್ಯಾನ್ಸ್ ಖುಷ್ ಆಗಿದ್ದಾರೆ. ಇನ್ನು ಮ್ಯಾಕ್ಸ್ ಸಿನಿಮಾ ಟಿಕೆಟ್ ಕೂಡ ಭಾರೀ ಸಂಖ್ಯೆಯಲ್ಲಿ ಸೋಲ್ಡ್ ಆಗಿದೆ. ಈ ಕುರಿತ ವಿಡಿಯೋ ಶೇರ್ ಮಾಡಿದ ಕಿಚ್ಚ ಸುದೀಪ್, ಥಿಯೇಟರ್ನಲ್ಲಿ ಸಿಗೋಣ ಎಂಬ ವಿಡಿಯೋವನ್ನು ಶೇರ್ ಮಾಡಿದ್ದಾರೆ. ಮ್ಯಾಕ್ಸ್ ಚಿತ್ರದಲ್ಲಿ ಸುದೀಪ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಒಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ರಾತ್ರಿಯಲ್ಲಿ ನಡೆಯುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾವನ್ನು ವಿಜಯ್ ಕಾರ್ತಿಕೇಯ ನಿರ್ದೇಶನ ಮಾಡಿದ್ದಾರೆ. ತಮಿಳಿನ ಖ್ಯಾತ ನಿರ್ಮಾಪಕ ಕಲೈಪುಲಿ ಎಸ್ ತನು ಅವರು ನಿರ್ಮಾಣ ಮಾಡಿದ್ದಾರೆ.
Home ತಾಜಾ ಸುದ್ದಿ ಗ್ರ್ಯಾಂಡ್ ಆಗಿ ತೆರೆಗೆ ಅಪ್ಪಳಿಸಿದ MAX ಸಿನಿಮಾ: ಮಾಸ್ ಲುಕ್ ನಲ್ಲಿ ಕಿಚ್ಚನನ್ನ ಕಣ್ತುಂಬಿಕೊಂಡ ಪ್ರೇಕ್ಷಕರು