Home ತಾಜಾ ಸುದ್ದಿ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ: ಮೂವರು ಕಿಡಿಗೇಡಿಗಳ ಬಂಧನ

ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ: ಮೂವರು ಕಿಡಿಗೇಡಿಗಳ ಬಂಧನ

0

ಬೆಂಗಳೂರು: ಜಾತಿ ನಿಂದನೆ ಹಾಗೂ ಹಲವು ಆರೋಪಗಳ ಮೇಲೆ ಜೈಲಿಗೆ ಹೋಗಿ ಜಾಮೀನಿನ ಮೇಲೆ ಆಚೆ ಬಂದಿರುವ ಮಾಜಿ ಶಾಸಕ ಹಾಗೂ ಕನ್ನಡ ಚಿತ್ರ ನಿರ್ಮಾಪಕ ಮುನಿರತ್ನ ಅವರ ತಲೆಗೆ ಮೊಟ್ಟೆ ಹೊಡೆದ ಘಟನೆ ಲಗ್ಗೆರೆ ಸಮೀಪದ ಲಕ್ಷೀದೇವಿನಗರದಲ್ಲಿ ನಡೆದಿದೆ.

ಲಕ್ಷ್ಮೀ ದೇವಿ ನಗರ ವಾರ್ಡ್ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚಾರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಾಸಕ ಮುನಿರತ್ನ ಹೋಗುತ್ತಿದ್ದ ವೇಳೆ ಕಂಠೀರವ ಸ್ಟುಡಿಯೋ ಬಳಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ.

ಈ ವೇಳೆ ಶಾಸಕ ಮುನಿರತ್ನ ಅವರು ತಮ್ಮ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಅವರು ಅಲ್ಲಿಂದ ತೆರಳಿದ್ದಾರೆ. ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು 2ರಿಂದ 3 ಕಾರು ಜಖಂ ಆಗಿ ಹಲವರಿಗೆ ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೂ ಶಾಸಕ ಮುನಿರತ್ನ ಬೆಂಬಲಿಗರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

LEAVE A REPLY

Please enter your comment!
Please enter your name here