Home ತಾಜಾ ಸುದ್ದಿ ಹೊಸ ವರ್ಷಕ್ಕೆ ಗ್ರಾಹಕರಿಗೆ ಬಿಗ್ ಶಾಕ್: ನಂದಿನಿ ಹಾಲಿನ ದರ ಏರಿಕೆ

ಹೊಸ ವರ್ಷಕ್ಕೆ ಗ್ರಾಹಕರಿಗೆ ಬಿಗ್ ಶಾಕ್: ನಂದಿನಿ ಹಾಲಿನ ದರ ಏರಿಕೆ

0

ಬೆಂಗಳೂರು: ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ 5 ರೂ. ಏರಿಕೆಯಾಗುವ ಸಾಧ್ಯತೆ ಇದ್ದು, ದರ ಏರಿಕೆಯ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್ ಸುಳಿವು ನೀಡಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ಹಾಲಿನ ದರವನ್ನು 5 ರೂ. ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿದೆ. ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಕೊಟ್ಟ ತಕ್ಷಣ ನಂದಿನಿ ಹಾಲಿನ ದರ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ನಂದಿನಿ ಹಾಲಿನ ದರದಲ್ಲಿ 2 ರೂ.ಕಡಿತ ಮಾಡಲು ನಿರ್ಧರಿಸಲಾಗಿದ್ದು, ಇದೀಗ ನಂದಿನಿ ಹಾಲಿನ ದರ 44 ರೂ.42 ರೂ.ಗೆ ಇಳಿಕೆಯಾಗಲಿದೆ ಎಂದು ಕೆಂಎಫ್ ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಕೆಲ ದಿನಗಳ ಹಿಂದೆ ಪ್ರತಿ ಲೀಟರ್ನಲ್ಲಿ ಹೆಚ್ಚುವರಿಯಾಗಿ 50 ಎಂಎಲ್ ನೀಡಿ 2 ರೂಪಾಯಿ ಏರಿಕೆ ಮಾಡಿತ್ತು. ಇದೀಗ ಕೆಎಂಎಫ್ ಹಾಲಿನ ದರ 2 ರೂ. ಕಡಿತ ಮಾಡಲು ನಿರ್ಧರಿಸಿದೆ.

LEAVE A REPLY

Please enter your comment!
Please enter your name here