Home ತಾಜಾ ಸುದ್ದಿ ಮಾಜಿ ಪ್ರಧಾನಿ ಡಾ. ಮನಮೋನನ್ ಸಿಂಗ್ ನಿಧನ: ಗಣ್ಯರ ಸಂತಾಪ

ಮಾಜಿ ಪ್ರಧಾನಿ ಡಾ. ಮನಮೋನನ್ ಸಿಂಗ್ ನಿಧನ: ಗಣ್ಯರ ಸಂತಾಪ

0

ನವದೆಹಲಿ : ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್(92) ಅವರು ವಯೋಸಹಜ ಕಾಯಿಲೆಯಿಂದ ಡಿ. 26ರಂದು ನಿಧರಾಗಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಇತರ ರಾಜಕೀಯ ಗಣ್ಯರು ಹಾಗೂ ಉದ್ಯಮ ಮತ್ತು ಸಿನಿರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನ

ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್‌ ಸಿಂಗ್‌ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ದೇಶದ ಆರ್ಥಿಕ ಸುಧಾರಣೆಗಳ ದಿಟ್ಟ ಹೆಜ್ಜೆ ಕೈಗೊಂಡು, ಆಧುನಿಕ ಭಾರತದ ಆರ್ಥಿಕತೆಯ ರೂವಾರಿ ಎನಿಸಿದ್ದ ಸಿಂಗ್, 1991ರ ಅಕ್ಟೋಬರ್ ನಲ್ಲಿ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಿದ್ದರು. ಅವರು 1991ರಿಂದ 1996ರವರೆಗೆ ನರಸಿಂಹ ರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು.

ಬಳಿಕ 2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿದ್ದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್‌ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು.

LEAVE A REPLY

Please enter your comment!
Please enter your name here