ಧರ್ಮಸ್ಥಳ: ನೇತ್ರಾವತಿಯನ್ನು ಸೇರುವ ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಎಸೆದಿರುವ ಕೃತ್ಯದ ಹಿಂದೆ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹುನ್ನಾರ ಇದೆ ಎಂದು ಆರೋಪಿಸಿರುವ ಹಿಂದು ಸಂಘಟನೆಗಳು ಒಂದು ವಾರದೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿವೆ. ಧರ್ಮಸ್ಥಳದ ಪುಣ್ಯನದಿಯಾಗಿರುವ ನೇತ್ರಾವತಿಯನ್ನು ಗೋ ಹಂತಕರು ಗೋಮಾಂಸ ತ್ಯಾಜ್ಯ ಎಸೆದು ಮಲಿನ ಮಾಡಿದ್ದಾರೆ. ಇದರ ಹಿಂದೆ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸ್ಪಷ್ಟ ಉದ್ದೇಶ ಇದೆ ಎಂದು ಬಜರಂಗ ದಳ ಗಂಭೀರ ಆರೋಪ ಮಾಡಿದೆ.



ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನ್ನಾರ್ ಎಂಬಲ್ಲಿ ನೇತ್ರಾವತಿಯನ್ನು ಸೇರುವ ಉಪನದಿ ಮೃತ್ಯುಂಜಯ ಹೊಳೆಗೆ ಕೆಲ ದಿನಗಳ ಹಿಂದೆ ಗೋಮಾಂಸದ ತ್ಯಾಜ್ಯಗಳನ್ನು ಮೂಟೆಕಟ್ಟಿ ತಂದು ಎಸೆಯಲಾಗಿದೆ. ಪಶ್ಚಿಮ ಘಟ್ಟದಿಂದ ಹರಿದು ಧರ್ಮಸ್ಥಳ ಬಳಿ ನೇತ್ರಾವತಿಯನ್ನು ಸೇರುವ ಮೃತ್ಯುಂಜಯ ಹೊಳೆಯಲ್ಲಿ ಮೂಟೆಗಟ್ಟಲೆ ಗೋವಿನ ರುಂಡ, ಮುಂಡ, ಚರ್ಮ ಎಸೆದಿರುವುದು ಕಂಡು ಬಂದಿದೆ. ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ –


ಮೃತ್ಯುಂಜಯ ನದಿಯಲ್ಲಿ ನಿತ್ಯ ಇಲ್ಲಿನ ಅಯ್ಯಪ್ಪ ವ್ರತಧಾರಿಗಳು ಸ್ನಾನ ಮಾಡುತ್ತಾರೆ. ಅಲ್ಲದೆ ಮೃತ್ಯುಂಜಯ ನದಿ ತುಸುದೂರ ಹರಿದು ನೇತ್ರಾವತಿ ನದಿಗೆ ಸೇರುತ್ತದೆ. ಧರ್ಮಸ್ಥಳದ ಸ್ನಾನಘಟ್ಟದಲ್ಲಿ ನಿತ್ಯ ಸಾವಿರಾರು ಭಕ್ತರು ನೇತ್ರಾವತಿಯಲ್ಲಿ ಪುಣ್ಯ ಸ್ನಾನ ಮಾಡುತ್ತಾರೆ. ಧರ್ಮಸ್ಥಳ ದೇಗುಲದ ಮಂಜುನಾಥ ಸ್ವಾಮಿಯ ನಿತ್ಯ ಅಭಿಷೇಕಕ್ಕೂ ನೇತ್ರಾವತಿಯ ನದಿಯ ನೀರನ್ನೇ ಬಳಸಲಾಗುತ್ತಿದೆ. ಅಯ್ಯಪ್ಪ ಭಕ್ತರು ಮತ್ತು ಧರ್ಮಸ್ಥಳದ ಪಾವಿತ್ರ್ಯ ಕೆಡಿಸುವ ಉದ್ದೇಶದಿಂದ ನದಿಗೆ ಗೋಮಾಂಸ ಎಸೆದಿದ್ದು, ಇದರಲ್ಲಿ ದೊಡ್ಡ ಕೋಮು ಷಡ್ಯಂತ್ರವಿದೆ ಎಂದು ಬಜರಂಗ ದಳ ಆರೋಪಿಸಿದೆ.