ಬೆಂಗಳೂರು: ಚೀನಾದಲ್ಲಿ ಆತಂಕಕ್ಕೆ ಕಾರಣವಾಗಿದೆ ಎನ್ನಲಾದ ಎಚ್ ಎಂಪಿವಿ ವೈರಸ್ ಇದೀಗ ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ.



ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿನಲ್ಲಿ ಪತ್ತೆಯಾಗಿದೆ. ಮಗುವಿಗೆ ಜ್ವರ (Fever) ಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಈ ವೇಳೆ ರಕ್ತ ಪರೀಕ್ಷೆ ಮಾಡಿಸಿದಾಗ ಹೆಚ್‌ಎಂವಿಪಿ ವೈರಸ್ ಇರುವುದು ದೃಢಪಟ್ಟಿದೆ.


ಸದ್ಯಕ್ಕೆ ಒಂದು ಕೇಸ್ ಪತ್ತೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಕಡೆ ಎಲ್ಲೆಲ್ಲಿ ಈ ರೀತಿಯ ಸೋಂಕು ಪತ್ತೆಯಾಗಿದೆ ಎಂಬುದರ ಮಾಹಿತಿ ಕಲೆ ಹಾಕಲು ಆರೋಗ್ಯ ಇಲಾಖೆ ಮುಂದಾಗಿದೆ.