Home ಉಡುಪಿ ಉಡುಪಿ: ರಸ್ತೆ ಬದಿಯ ಮರಕ್ಕೆ ಬೈಕ್ ಡಿಕ್ಕಿ- 28 ವರ್ಷದ ಯುವಕ ಮೃತ್ಯು

ಉಡುಪಿ: ರಸ್ತೆ ಬದಿಯ ಮರಕ್ಕೆ ಬೈಕ್ ಡಿಕ್ಕಿ- 28 ವರ್ಷದ ಯುವಕ ಮೃತ್ಯು

0

ಉಡುಪಿ: ರಸ್ತೆ ಬದಿಯ ಮರಕ್ಕೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಸಂಭವಿಸಿದೆ.

ಮೃತರನ್ನು ಸಂತೋಷ್ (28) ಎಂದು ಗುರುತಿಸಲಾಗಿದೆ. ಪೆರ್ಡೂರು ಕಡೆಯಿಂದ ಹರಿಖಂಡಿಗೆ ಕಡೆಗೆ ಹೋಗುತ್ತಿದ್ದ ಬೈಕ್, ಸವಾರನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸವಾರ ಸಂತೋಷ್ ಹಿರಿಯಡಕ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here