ನವದೆಹಲಿ : ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.



ಅವರು ಇಂದು ನವದೆಹಲಿಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಕನ್ನಡ ಭವನದ ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಜಾತಿ ಗಣತಿ ವರದಿಯ ಜಾರಿ ಬಗ್ಗೆ ಉತ್ತರಿಸುತ್ತಾ ಮಾಧ್ಯಮದವರೊಂದಿಗೆ ಮಾತನಾಡಿದರು

