ಸುಳ್ಯ : ಇತ್ತೀಚಿನ ದಿನಗಳಲ್ಲಿ ವಂಚನೆಗಳು ಹೆಚ್ಚುತ್ತಿದ್ದು, ವಂಚಕರು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಇದೀಗ ಕಡಬ ಮತ್ತು ಸುಳ್ಯದ ಪೆಟ್ರೋಲ್ ಬಂಕ್‌ಗಳಲ್ಲಿ ಹೊಸ ರೀತಿಯ ವಂಚನೆ ನಡೆದಿದೆ.
KA01MX9632 ನಂಬರಿನ ಥಾರ್ ಜೀಪ್‌ನ ಚಾಲಕನೊಬ್ಬ, ಬುಧವಾರ ಬೆಳಗ್ಗೆ 6 ಗಂಟೆಗೆ ಕಡಬದ ಹಿಂದೂಸ್ಥಾನ್ ಪೆಟ್ರೋಲ್ ಬಂಕ್‌ಗೆ ಬಂದು ತನ್ನ ವಾಹನಕ್ಕೆ ಫುಲ್ ಟ್ಯಾಂಕ್ ಡೀಸೆಲ್ ಹಾಕಿಸಿಕೊಂಡಿದ್ದಾನೆ. ನಂತರ, ಪೆಟ್ರೋಲ್ ಬೇಕೆಂದು ಹೇಳಿ ಬಂಕ್ ಸಿಬ್ಬಂದಿಯನ್ನು ಮತ್ತಷ್ಟು ಗೊಂದಲಕ್ಕೀಡು ಮಾಡಿದ್ದಾನೆ. ಈ ಅವಧಿಯಲ್ಲಿ ಅವನು ಡೀಸೆಲ್ ಹಣ ನೀಡದೆ ಜೀಪ್‌ನಲ್ಲಿ ಎಸ್ಕೇಪ್ ಆಗಿದ್ದಾನೆ.
ಇದೇ ರೀತಿಯ ಘಟನೆ ಡಿಸೆಂಬರ್ 25ರಂದು ಸುಳ್ಯದ ಪೈಚಾರು ಪೆಟ್ರೋಲ್ ಬಂಕ್‌ನಲ್ಲೂ ನಡೆದಿದೆ. ಒಬ್ಬ ವ್ಯಕ್ತಿ ಹಲವು ಕಡೆಗಳಲ್ಲಿ ಇದೇ ರೀತಿಯಲ್ಲಿ ವಂಚನೆ ಮಾಡುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವಾಹನಗಳು ಎಲ್ಲಿ ಕಂಡುಬಂದರೂ ಕೂಡಲೇ ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.