Home ಕರಾವಳಿ ಮಂಗಳೂರು: ಮಸಾಜ್ ಪಾರ್ಲರ್‌ಗೆ ದಾಳಿ ಪ್ರಕರಣ – ಟಿವಿ ಕ್ಯಾಮರಮ್ಯಾನ್ ಸಹಿತ 14ಮಂದಿ ಅರೆಸ್ಟ್

ಮಂಗಳೂರು: ಮಸಾಜ್ ಪಾರ್ಲರ್‌ಗೆ ದಾಳಿ ಪ್ರಕರಣ – ಟಿವಿ ಕ್ಯಾಮರಮ್ಯಾನ್ ಸಹಿತ 14ಮಂದಿ ಅರೆಸ್ಟ್

0

ಮಂಗಳೂರು: ನಗರದ ಬಿಜೈನಲ್ಲಿರುವ ಮಸಾಜ್ ಪಾರ್ಲರ್‌ಗೆ ದಾಳಿಗೆ ಸಂಬಂಧಿಸಿದಂತೆ ಸ್ಥಳೀಯ ಚಾನೆಲ್ ಕ್ಯಾಮರಾಮ್ಯಾನ್ ಸಹಿತ 14ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಯಾಮರಮ್ಯಾನ್ ಶರಣ್ ರಾಜ್, ರಾಮಸೇನೆ ಸ್ಥಾಪಕ ಪ್ರಸಾದ್ ಅತ್ತಾವರ್, ರಾಮಸೇನೆಯ ಕಾರ್ಯಕರ್ತರಾದ ಫರಂಗಿಪೇಟೆಯ ಹರ್ಷರಾಜ್, ವಾಮಂಜೂರಿನ ಮೋಹನ್‌ದಾಸ್, ಕಾಸರಗೋಡಿನ ಪುರಂದರ, ವಾಮಂಜೂರಿನ ಸಚಿನ್, ರವೀಶ್, ಅಂಕಿತ್, ಬೆಂಜನಪದವಿನ ಸುಕೇತ್, ಮೂಡುಶೆಡ್ಡೆಯ ಕಾಳಿಮುತ್ತು, ಬೊಂಡಂತಿಲದ ಅಭಿಲಾಷ್, ವಾಮಂಜೂರಿನ ದೀಪಕ್, ನೀರುಮಾರ್ಗದ ವಿಘ್ನೇಶ್, ವಾಮಂಜೂರಿನ ಪ್ರದೀಪ್ ಪೂಜಾರಿ ಬಂಧಿತ ಆರೋಪಿಗಳು ಇಂದು ಬೆಳಗ್ಗೆ ಸುಮಾರು 11:50ಕ್ಕೆ, 11ಮಂದಿಯ ತಂಡ ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣೆ ವ್ಯಾಪ್ತಿಯ ಬಿಜೈ ಕೆಎಸ್‌ಆರ್‌ಟಿಸಿ ಬಳಿಯ ಆದಿತ್ಯ ಕಾಂಪ್ಲೆಕ್ಸ್‌ನಲ್ಲಿರುವ “ಕಲರ್ಸ್” ಎಂಬ ಯೂನಿಸೆಕ್ಸ್ ಸಲೂನ್‌ಗೆ ನುಗ್ಗಿ ದಾಂದಲೆ ನಡೆಸಿತ್ತು.

ಸೆಲೂನ್ ಅನೈತಿಕ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ವ್ಯಕ್ತಿಗಳು ಆರೋಪಿಸಿ ಮಹಿಳಾ ಸಿಬ್ಬಂದಿಯನ್ನು ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆಯೊಡ್ಡಿದ್ದರು. ಅಷ್ಟು ಮಾತ್ರವಲ್ಲದೆ ಸೆಲೂನ್ ಉಪಕರಣಗಳನ್ನು ಧ್ವಂಸಗೊಳಿಸಿ, ಉದ್ಯೋಗಿಗಳ ಮೇಲೆ ಹಲ್ಲೆ ನಡೆಸಿದ್ದರು.

ಆದ್ದರಿಂದ ಸೆಲೂನ್ ಮಾಲಕ ನೀಡಿದ ದೂರಿನ ಆಧಾರದ ಮೇಲೆ, ಬರ್ಕೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 06/2025 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. BNS ನ ಸೆಕ್ಷನ್ 329(2), 324(5), 74, 351(3), 115(2), 109, 352, ಮತ್ತು 190 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here