![](https://i0.wp.com/prakharanews.com/wp-content/uploads/2025/01/WhatsApp-Image-2025-01-21-at-12.33.45-PM-scaled.jpeg?fit=2048%2C2560&ssl=1)
ಬೆಂಗಳೂರು: ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲಿಯ ನೀರು ಬಳಕೆ ಮಾಡದಂತೆ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಕೇವಲ ಗ್ಲಾಸ್ ನಲ್ಲಿ ನೀರು ಪೂರೈಕೆ ಮಾಡುವಂತೆ, ಪರಿಸರ ಮಾರಕವಾಗಿರುವಂತ ಪ್ಲಾಸ್ಟಿಕ್ ಬಾಟಲಿ ನೀರು ಪೂರೈಕೆ ಮಾಡದಂತೆ ಖಡಕ್ ಸೂಚನೆ ನೀಡಿದೆ.
![](https://i0.wp.com/prakharanews.com/wp-content/uploads/2025/01/WhatsApp-Image-2025-01-22-at-5.17.51-PM.jpeg?fit=1157%2C1600&ssl=1)
![](https://i0.wp.com/prakharanews.com/wp-content/uploads/2025/01/WhatsApp-Image-2025-01-23-at-5.27.18-PM.jpeg?fit=681%2C706&ssl=1)
![](https://i0.wp.com/prakharanews.com/wp-content/uploads/2025/01/girija-1.jpg?fit=1158%2C1756&ssl=1)
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ಸರ್ಕಾರದ ಅಧಿಸೂಚನೆ ಸಂಖ್ಯೆ: ಅಪಜೀ 17 ಇಪಿಸಿ 2012, ದಿನಾಂಕ: 11.03.2016 ರಲ್ಲಿ ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನ (Single use packaged water bottles) ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ. ಇಂತಹ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್, ಪೇಪರ್ ಮತ್ತಿತರ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸುವಂತೆ ಅಧಿಸೂಚನೆ / ಆದೇಶ / ಸುತ್ತೋಲೆ ಹೊರಡಿಸಲಾಗಿದೆ ಎಂದಿದೆ.
![](https://i0.wp.com/prakharanews.com/wp-content/uploads/2025/01/IMG-20241214-WA0021-scaled.jpg?fit=1810%2C2560&ssl=1)
ಆದೇಶ ಸಂ. ಸಿಆಸುಇ 83 ರಾಸವಿ 2018 ದಿನಾಂಕ 05.09.2018 ಹಾಗೂ ಸುತ್ತೋಲೆ ಸಿಆಸುಇ 78 ಡಿಬಿಎಂ 2024 ದಿನಾಂಕ 08.11.2024ರ ರಲ್ಲಿ ಮತ್ತೊಮ್ಮೆ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ ಸರಬರಾಜು ಮಾಡುವುದನ್ನು ನಿಷೇದಿಸಿದೆ. ಹಾಗೂ ಸೂಕ್ತ ಸಾಮೂಹಿಕ ಕುಡಿಯುವ ನೀರು ವಿತರಣಾ ಏರ್ಪಡಿಸುವಂತೆ ಸೂಚಿಸಿ ಆದೇಶ / ಸುತ್ತೋಲೆಗಳನ್ನು ಹೊರಡಿಸಲಾಗಿಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಆದಕಾರಣ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗಿದೆ.
ಮುಂದುವರೆದು, ಎಲ್ಲಾ ಇಲಾಖೆಯ ಮುಖ್ಯಸ್ಥರುಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆ,ಮಂಡಳಿ,ನಿಗಮ ಗಳಿಗೆ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡುವಂತೆ ಸೂಚಿಸಿದೆ.