ಪುತ್ತೂರು : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ಹಲವು ಮನೆಗಳನ್ನು ಈಗಾಗಲೇ ತೆರವುಗೊಳಿಸಲಾಗಿದ್ದು, ಇಂದು ಬೆಳಗಿನ ಜಾವ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆಯನ್ನು ನೆಲಸಮಗೊಳಿಸಲಾಗಿದೆ.
ದೇವಳದ ಹಿಂಬಂದಿಯಲ್ಲಿರುವ ಹಲವು ಮನೆಗಳವರು ಸ್ವಇಚ್ಛೆಯಿಂದ ಮನೆ ಬಿಟ್ಟು ಕೊಟ್ಟಿದ್ದಾರೆ. ರಾಜೇಶ್ ಬನ್ನೂರು ಜೊತೆ ಮಾತುಕತೆ ನಡೆಸುವುದೆಂದು ಫೆ.4ರಂದು ನಿಗದಿಯಾಗಿತ್ತು, ಆದರೆ ಮಾತುಕತೆ ನಿನ್ನೆ ನಡೆದಿರಲಿಲ್ಲ. ಇದೀಗ ಪುತ್ತೂರು ಬಿಜೆಪಿ ಪ್ರತಿಭಟನೆ ಕೈಗೊಂಡಿದೆ. ರಾಜೇಶ್ ಬನ್ನೂರು ಅವರ ಮನೆಯ ಎದುರು ಪ್ರತಿಭಟನೆ ನಡೆಯುತ್ತಿದೆ.
ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು, ಚನಿಲ ತಿಮ್ಮಪ್ಪ ಶೆಟ್ಟಿ, ಶಿವಕುಮಾರ್ ಸಹಿತ ಕೆಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ, ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯ ವಿನಯ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ.