
27 ವರ್ಷದ ಬಳಿಕ ದೆಹಲಿಯಲ್ಲಿ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಹಿಡಿದಿದೆ. ಈ ವಿಜಯದ ವಿಜಯೋತ್ಸವದ ಭಾಷಣಕ್ಕೆ ಪ್ರಧಾನಿ ಮೋದಿ ರೆಡಿಯಾಗಿದ್ದಾರೆ. ಈಗಾಗಲೇ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಬಹುಮತ ದಾಟಿಕೊಂಡು ಹೋಗಿದೆ. 70 ಕ್ಷೇತ್ರಗಳಲ್ಲಿ 45 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು. ಬಿಜೆಪಿಗೆ ಗೆಲುವು ಫಿಕ್ಸ್ ಎಂಬುದು ಸ್ಪಷ್ಟವಾಗಿದೆ. ಈಗಾಗಲೇ ಬಿಜೆಪಿ ಕಚೇರಿ ಎದುರು ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದು. ವಿಜಯೋತ್ಸವ ಆಚರಿಸಲಿದ್ದಾರೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕರ್ತರನ್ನು ಉದ್ದೇಶಿಸಿ ಗೆಲುವಿನ ಸಂಭ್ರಮದ ಬಗ್ಗೆ ತನಾಡಲಿದ್ದಾರೆ. ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಗೆ ಬರಲಿರುವ ಮೋದಿ ವಿಜಯೋತ್ಸವದ ಭಾಷಣ ಮಾಡಲಿದ್ದಾರೆ.


