
ಮಂಗಳೂರು: ಮದ್ಯದ ಮತ್ತಲ್ಲಿ ಕಾಲೇಜು ವಿದ್ಯಾರ್ಥಿಗಳು ಬೀದಿ ಕಾಳಗ ನಡೆಸಿ ರಂಪಾಟ ಮಾಡಿದ ಘಟನೆ ಮಂಗಳೂರು ಹೊರವಲಯದ ವಳಚ್ಚಿಲ್‌ನಲ್ಲಿ ನಡೆದಿದೆ.



ಸ್ಥಳೀಯ ಬಾರ್‌ನಲ್ಲಿ ಮದ್ಯ ಸೇವನೆಗೆ ಬಂದಿದ್ದ ಈ ವಿದ್ಯಾರ್ಥಿಗಳು ಬಾರ್ ಹೊರಗಡೆ ರಸ್ತೆಯಲ್ಲಿಯೇ ಬೈಕ್ ನಿಲ್ಲಿಸಿ ತೂರಾಡಿಕೊಂಡಿದ್ದರು. ಸ್ಥಳೀಯರು ಮನೆಯತ್ತ ತೆರಳುತ್ತಿದ್ದಾಗ ರಸ್ತೆಯಿಂದ ಬೈಕ್ ತೆರವುಗೊಳಿಸುವಂತೆ ಹೇಳಿದ್ದಾರೆ.


ಈ ವೇಳೆ ಮದ್ಯದ ಮತ್ತಲ್ಲಿದ್ದ ವಿದ್ಯಾರ್ಥಿಗಳು ಪ್ರಶ್ನಿಸಿದವರಿಗೆ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಗಲಾಟೆ ಬಿಡಿಸಲು ಬಂದ ಇತರರಿಗೂ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಸ್ಥಳೀಯ ಕಾಲೇಜುಗಳಿಗೆ ಸೇರಿದ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ.
ಈ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.