Home ಕರಾವಳಿ ಮಂಗಳೂರು : ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪೊಲೀಸ್ ಚೆಕ್ ಪೋಸ್ಟ್

ಮಂಗಳೂರು : ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪೊಲೀಸ್ ಚೆಕ್ ಪೋಸ್ಟ್

0

ಮಂಗಳೂರು: ನಗರದ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಹೊಸ ಪೊಲೀಸ್ ಚೆಕ್ ಪೋಸ್ಟ್ ಸ್ಥಾಪಿಸಲಾಗಿದ್ದು, ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ನೇತೃತ್ವದಲ್ಲಿ ಉದ್ಘಾಟನೆ ಮಾಡಿದ್ದಾರೆ.

ನಿನ್ನೆ (ಫೆ.16) ಇದರ ಉದ್ಘಾಟನೆ ನೆರವೇರಿದ್ದು, ಮಂಗಳೂರು ನಗರ ಪೊಲೀಸರ ಸಹಯೋಗದೊಂದಿಗೆ ಈ ಚೆಕ್‌ಪೋಸ್ಟ್ ಕಾರ್ಯರಂಭಿಸಿದೆ. ಪ್ರಯಾಣಿಕರು ಮತ್ತು ವಿಮಾನ ನಿಲ್ದಾಣದ ಸಿಬ್ಬಂದಿಯಸುರಕ್ಷತೆ ಮತ್ತು ಭದ್ರತೆಯನ್ನು ಹೆಚ್ಚಿಸುವ ಗುರಿಯನ್ನು ಈ ಚೆಕ್‌ಪೋಸ್ಟ್ ಹೊಂದಿದೆ.  ಉತ್ತಮ ತರಬೇತಿ ಪಡೆದ ಸಿಬ್ಬಂದಿ ಚೆಕ್ ಪೋಸ್ಟ್‌ನಲ್ಲಿ ದಿನದ 24 ಗಂಟೆಯೂ ಕಾರ್ಯನಿರತರಾಗಿರುತ್ತಾರೆ ಎಂದು ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here