
ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಎಂಬಿ ಫೌಂಡೇಶನ್ ಮತ್ತು V4 ನ್ಯೂಸ್, ಸಹಯೋಗದಲ್ಲಿ ‘ಅರೆಭಾಷೆ ಕಾಮಿಡಿ’ ರಿಯಾಲಿಟಿ ಶೋ ಗೆ ತಂಡಗಳ ಆಯ್ಕೆಗಾಗಿ ಆಡಿಷನ್ ಸುಳ್ಯದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು.



ಕಾರ್ಯಕ್ರಮವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಅರೆಭಾಷೆ ಬೆಳವಣಿಗೆಗೆ ಹೊಸ ಪ್ರಯತ್ನವನ್ನು ನಡೆಸಲಾಗತ್ತಿದೆ .ಇನ್ನೂ ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಅರೆಭಾಷೆ ಕಲಾವಿದರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿಸಲು ಉತ್ತಮ ಅವಕಾಶ ಎಂದು ಹೇಳಿದರು.


ವೇದಿಕೆಯಲ್ಲಿ ವಿ4 ಚಾನೆಲ್‌ನ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ್ ಕುಂದರ್, ಪ್ರಾದೇಶಿಕ ಸುದ್ದಿ ಸಂಪಾದಕ ಪುಷ್ಪರಾಜ್ ಶೆಟ್ಟಿ, ಎಂ.ಬಿ.ಫೌಂಡೇಶನ್‌ನ ಅಧ್ಯಕ್ಷ ಎಂ.ಬಿ.ಸದಾಶಿವ
ದ ಕ.ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಭರತ್ ಮುಂಡೋಡಿ
, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್, ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ.ಸಿ.ಸದಾನಂದ, ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿ, ನಿರ್ದೇಶಕರುಗಳಾದ ಎ.ವಿ.ತೀರ್ಥರಾಮ, ಚಂದ್ರ ಕೋಲ್ಚಾರ್, ಎಂ.ಬಿ. ಪೌಂಡೇಶನ್ ಸದಸ್ಯ ಎಸ್.ಆರ್. ಸೂರಯ್ಯ, ಅರೆ ಭಾಷೆ ಕಲಾವಿದರ ಒಕ್ಕೂಟದ ಅಧ್ಯಕ್ಷ ಭವಾನಿಶಂಕರ ಅಡ್ತಲೆ, ಲಯನ್ಸ್ ಕ್ಲಬ್ ಅಧ್ಯಕ್ಷ ರಾಮಕೃಷ್ಣ ರೈ, ಅರೆಭಾಷೆ ಅಕಾಡೆಮಿ ಸದಸ್ಯರಾದ ತೇಜಕುಮಾರ್ ಬಡ್ಡಡ್ಕ, ಚಂದ್ರಶೇಖರ ಪೇರಾಲು, ಡಾ.ಎನ್.ಎ.ಜ್ಞಾನೇಶ್, ಲತಾ ಕುದ್ಪಾಜೆ ಮತ್ತಿತರರು ಉಪಸ್ಥಿತರಿದ್ದರು.
ಅರೆಭಾಷೆ ಅಕಾಡೆಮಿ ಸದಸ್ಯ ಲೋಕೇಶ್ ಊರುಬೈಲು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಚಂದ್ರಾವತಿ ಬಡ್ಡಡ್ಕ ವಂದಿಸಿದರು.