
ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ.26, ಬುಧವಾರದಂದು ಸಂಜೆ 7-30ರ ಬಳಿಕ ಮಹಾಶಿವರಾತ್ರಿ ಉತ್ಸವ ನಡೆಯಲಿರುವುದು.



ಮಹಾಶಿವರಾತ್ರಿ ಪ್ರಯುಕ್ತ ವಿಶೇಷವಾಗಿ ಬೆಳಿಗ್ಗೆ ಗಂಟೆ 7-30ರಿಂದ ಶ್ರೀ ದೇವರಿಗೆ ಮಹಾರುದ್ರಯಾಗ, 9 ಗಂಟೆಗೆ ಶತರುದ್ರಾಭಿಷೇಕ, ಬಿಲ್ವಾರ್ಚನೆ ಸೇವೆ ಹಾಗೂ ಭಜನಾ ಕಾರ್ಯಕ್ರಮ ಜರಗಲಿರುವುದು.


ಈ ಕಾರ್ಯಕ್ರಮದಲ್ಲಿ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.