Home ತಾಜಾ ಸುದ್ದಿ ದೆಹಲಿಯ ನೂತನ `CM’ ಆಗಿ `ರೇಖಾ ಗುಪ್ತಾ’ ಪ್ರಮಾಣವಚನ ಸ್ವೀಕಾರ

ದೆಹಲಿಯ ನೂತನ `CM’ ಆಗಿ `ರೇಖಾ ಗುಪ್ತಾ’ ಪ್ರಮಾಣವಚನ ಸ್ವೀಕಾರ

0

ನವದೆಹಲಿ: ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ರಾಮ್ ಲೀಲಾ ಮೈದಾನದಲ್ಲಿ ಬಿಜೆಪಿಯ ಶಾಸಕಿ ರೇಖಾ ಗುಪ್ತಾ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಪ್ರಮಾಣವಚನ ಬೋಧಿಸಿದ್ದಾರೆ.

ರೇಖಾ ಗುಪ್ತಾ ಮಾಜಿ ಕೌನ್ಸಿಲರ್ ಮತ್ತು ಉಪ ಮೇಯರ್ ಆಗಿದ್ದು, ಶಾಲಿಮಾರ್ ಬಾಗ್ ವಿಧಾನಸಭಾ ಸ್ಥಾನದಿಂದ ಎಎಪಿಯ ಬಂದನಾ ಕುಮಾರಿ ಅವರನ್ನು ಸೋಲಿಸಿ ವಿಜಯಶಾಲಿಯಾಗಿ ಹೊರಹೊಮ್ಮಿದರು. ಪ್ರಮಾಣಚನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

ಸುಷ್ಮಾ ಸ್ವರಾಜ್, ಶೀಲಾ ದೀಕ್ಷಿತ್ ಮತ್ತು ಅತಿಶಿ ನಂತರ ರೇಖಾ ಗುಪ್ತಾ ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿದ್ದಾರೆ. ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಮತ್ತು ಆರು ಕ್ಯಾಬಿನೆಟ್ ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಮುಖ್ಯಮಂತ್ರಿ ಮತ್ತು ಹೊಸ ಕ್ಯಾಬಿನೆಟ್ ಸಚಿವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.

LEAVE A REPLY

Please enter your comment!
Please enter your name here