
ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ಇಂದು (ಫೆ.22) ಸಂಭವಿಸಿದೆ.



ಮೃತರನ್ನು ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್ (55) ಎಂದು ಗುರುತಿಸಲಾಗಿದೆ.
ಮೃತರು ಮಣಿಪಾಲದ ಜಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದರು. ಕಾರು ಇಳಿದು ಬೀಡ ತೆಗೆದುಕೊಳ್ಳಲು ಪಕ್ಕದ ರಸ್ತೆಯಲ್ಲಿರುವ ಅಂಗಡಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರು ಅತಿ ವೇಗದಲ್ಲಿದ್ದ ಪರಿಣಾಮ ರಮೇಶ್ ನಾಯಕ್ ಅವರನ್ನು ಸುಮಾರು ದೂರ ರಸ್ತೆಯಲ್ಲೇ ಎಳೆದುಕೊಂಡು ಹೋಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ರಮೇಶ್ ಅವರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.
ಘಟನೆಯ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

