
ಮಂಗಳುರು : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಟುಂಬ ಸಹಿತ ಗುರುವಾರ (ಫೆ.27) ಸಂಜೆ ಭೇಟಿ ನೀಡಿದ್ದಾರೆ.
ಕುಟುಂಬದ ಮನೆಯಾದ ನಿಡ್ಡೋಡಿಯಲ್ಲಿರುವ ಭೇಟಿ ನೀಡಲು ಬರುವ ಸಂದರ್ಭದಲ್ಲಿ ಕಟೀಲು ದುರ್ಗಾಪರಮೇಶ್ವರಿ ಅಮ್ಮನ ದೇವಸ್ಥಾನಕ್ಕೆ ಭೇಟಿ ನೀಡುವ ಪರಂಪರೆಯನ್ನು ನಟಿ ಶಿಲ್ಪಾ ಶೆಟ್ಟಿ ಪಾಲಿಸಿಕೊಂಡು ಬರುತ್ತಿದ್ದಾರೆ. ಅಂತೆಯೇ ಈ ಬಾರಿಯೂ ನಟಿ ತನ್ನ ಕುಟುಂಬ ಸಮೇತರಾಗಿ ದೇವಿಯ ದರ್ಶನ ಪಡೆದಿದ್ದಾರೆ.
ಈ ಸಂದರ್ಭದಲ್ಲಿ ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ ಆಸ್ರಣ್ಣ, ಹರಿನಾರಾಯಣದಾಸ ಆಸ್ರಣ್ಣ, ಸದಾನಂದ ಆಸ್ರಣ್ಣ ಇವರು ಉಪಸ್ಥಿತರಿದ್ದರು.


