Home ತಾಜಾ ಸುದ್ದಿ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್: ಮಾಸಿಕ ಗೌರವಧನ 2000 ರೂ.ಹೆಚ್ಚಳ

ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್: ಮಾಸಿಕ ಗೌರವಧನ 2000 ರೂ.ಹೆಚ್ಚಳ

0

ಬೆಂಗಳೂರು: ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮಾಸಿಕ ಗೌರವಧನ 2 ಸಾವಿರ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಸ್ತಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಸಹಜವಾಗಿಯೇ ಈ ಬಾರಿಯ ಬಜೆಟ್ ಮೇಲೆ ನಿರೀಕ್ಷೆಗಳು ಹೆಚ್ಚಿವೆ.

ಸಿಎಂ ಸಿದ್ಧರಾಮಯ್ಯ ರಾಜ್ಯದ ಮಟ್ಟಿಗೆ ಅತ್ಯಧಿಕ 16ನೇ ಬಜೆಟ್ ಮಂಡಿಸುವ ದಾಖಲೆ ಬರೆಯಲಿದ್ದಾರೆ. ಮುಖ್ಯಮಂತ್ರಿಯಾಗಿ ಇದು 9ನೇ ಬಜೆಟ್ ಆಗಿದೆ.ರಾಜ್ಯದಲ್ಲಿ ಜುಲೈ 2023ರಲ್ಲಿ 14ನೇ ಬಜೆಟ್ ಮಂಡಿಸಿದಾಗಲೇ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಸಿದ್ದರಾಮಯ್ಯ ಅವರ ಹೆಸರಿನಲ್ಲಿದೆ. 2024-25ನೇ ಸಾಲಿನ ಬಜೆಟ್ ಅನ್ನು ಫೆಬ್ರವರಿ ತಿಂಗಳಲ್ಲಿ ಮಂಡಿಸಿದ್ದರು.

ಇದು ಅವರ 15ನೇ ಬಜೆಟ್ ಆಗಿತ್ತು. ಸಿದ್ದರಾಮಯ್ಯ ಅವರ 16ನೇ ಬಜೆಟ್ ಹಲವು ವೈಶಿಷ್ಠ್ಯಗಳನ್ನು ಹೊಂದಿದೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ.ಗಳನ್ನು ದಾಟಲಿದೆ ಎನ್ನಲಾಗಲಿದೆ.

LEAVE A REPLY

Please enter your comment!
Please enter your name here