Home ಉಡುಪಿ ಉಡುಪಿ: ತಾಯಿ ಮೊಬೈಲ್ ಕಸಿದುಕೊಂಡಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ!

ಉಡುಪಿ: ತಾಯಿ ಮೊಬೈಲ್ ಕಸಿದುಕೊಂಡಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ!

0

ಉಡುಪಿ: ಮೊಬೈಲ್ ಕೊಡಲಿಲ್ಲ ಎಂಬ ವಿಚಾರಕ್ಕೆ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾಸ್ತಾನದ ಕುಂಬಾರಬೆಟ್ಟುವಿನಲ್ಲಿ ನಡೆದಿದೆ.

ಬ್ರಹ್ಮಾವರ ತಾಲೂಕಿನ ಸಾಸ್ತಾನದ ಕುಂಬಾರಬೆಟ್ಟು ನಿವಾಸಿ ದಿನೇಶ್ ಮೊಗವೀರ ಎಂಬವವರ ಪುತ್ರಿ ದಿಶಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.

ಮೊಬೈಲ್ ಹಿಡಿದುಕೊಂಡು ಕುಳಿತಿದ್ದ ಹಿನ್ನಲೆ ದಿಶಾಳ ತಾಯಿ ಗದರಿಸಿದ್ದು, ಮೊಬೈಲ್ ಕಸಿದುಕೊಂಡಿದ್ದಾರೆ. ಇದರಿಂದ ಕೋಪಗೊಂಡ ದಿಶಾ ನೇರವಾಗಿ ಕೋಣೆಯ ಬಾಗಿಲು ಹಾಕಿಕೊಂಡಿದ್ದು, ತಾಯಿ ಜೋರು ಮಾಡಿ ಬಾಗಿಲು ತೆರೆಯಲು ಹೇಳಿದ್ದಾರೆ. ಎಷ್ಟು ಹೊತ್ತಾದರೂ ಬಾಗಿಲು ತೆರೆಯದೆ ಇರುವುದನ್ನು ಕಂಡ ತಾಯಿ, ಪರಿಶೀಲನೆ ನಡೆಸಿದಾಗ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ.

ಮನೆಯ ಕಿಟಕಿಯ ಕಂಬಿಗೆ ಹಗ್ಗ ಹಾಕಿಕೊಂಡು ಆತ್ಮಹತ್ಯೆ ಯತ್ನಿಸಿದ್ದು, ತಕ್ಷಣ ಸ್ಥಳೀಯರು ಬಂದು ಬಾಲಕಿಯನ್ನು ರಕ್ಷಿಸಿದ್ದಾರೆ. ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾಳೆ. ವಿದ್ಯಾರ್ಥಿನಿ ಸ್ಥಳೀಯ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಶಿಕ್ಷಣ ಪಡೆಯುತ್ತಿದ್ದಳು. ಸ್ಥಳಕ್ಕೆ ಕೋಟ ಕೈಂ ಪಿಎಸ್‌ಐ ಸುಧಾಪ್ರಭು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here