
ಬೆಂಗಳೂರು : ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಗೆ ಇದೀಗ ಮತ್ತೊಂದು ಶಾಕ್, ರನ್ಯಾ ರಾವ್ ವಿರುದ್ಧ ಸಿಬಿಐ(CBI) ಪ್ರಕರಣ ದಾಖಲಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.



ದುಬೈ ನಿಂದ ಅಕ್ರಮವಾಗಿ 14 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ. ಆದರೆ ಈ ಒಂದು ಪ್ರಕರಣದ ತನಿಖೆಯ ವೇಳೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದ್ದು, ನಟಿ ರನ್ಯಾ ರಾವ್ ಅವರನ್ನು ತಮ್ಮ ಕೆಲಸಕ್ಕೆ ಬಳಸಿಕೊಂಡ ಮತ್ತೊಂದು ಟೀಂ ಇದರ ಹಿಂದೆ ಇದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ವಹಿಸಿಕೊಂಡಿದೆ ಎಂದು ವರದಿಯಾಗಿದೆ.


ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು. ಅವರನ್ನು ಡಿ.ಆರ್.ಐ. ಅಧಿಕಾರಿಗಳು ವಶಕ್ಕೆ ಕೇಳದ ಹಿನ್ನೆಲೆಯಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.ರನ್ಯಾ ರಾವ್ ಬಳಿ ಒಟ್ಟು 14.8 ಕೆಜಿ ಚಿನ್ನ ಸಿಕ್ಕಿರುವ ಮಾಹಿತಿ ಇದೆ.