Home ಕರಾವಳಿ ಕಾರ್ಕಳ ನಗರ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಮಹಿಳಾ ಸಾಧಕಿಯರಿಗೆ ಸನ್ಮಾನ

ಕಾರ್ಕಳ ನಗರ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಮಹಿಳಾ ಸಾಧಕಿಯರಿಗೆ ಸನ್ಮಾನ

0

ಕಾರ್ಕಳ ನಗರ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉದಯ ಶೆಟ್ಟಿ ಮುನಿಯಾಲು, ಮಹಿಳೆಯರು ಕುಟುಂಬದ ಶಕ್ತಿಯಾಗಿ ಕುಟುಂಬ ಸಲಹುತ್ತಾರೆ, ಜೊತೆಗೆ ಮಹಿಳೆಯರು ಸ್ವಾವಲಂಬಿಗಳಾಗಿರುವುದರಿಂದ ದೇಶದ ಪ್ರಗತಿ ಸಾಧ್ಯವಾಗುತ್ತಿದೆ, ಈ ನಿಟ್ಟಿನಲ್ಲಿ ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ಸರ್ಕಾರಗಳು ಮಹಿಳಾ ಸಬಲೀಕರಣಕ್ಕೆ ಹಲವಾರು ಯೋಜನೆಗಳನ್ನು ಕಾರ್ಯಕ್ರಮಗಳನ್ನು ಹಾಕಿಕೊಂಡ ಪರಿಣಾಮ ಇಂದು ಅದರ ಪ್ರತಿಫಲವು ದೇಶದಾದ್ಯಂತ ಪ್ರತಿಫಲಿಸುತ್ತಿದೆ ಎಂದರು.

ಕಾರ್ಯಕ್ರಮದ ಮುಖ್ಯ ಉಪನ್ಯಾಸಕಿಯಾಗಿ ಆಗಮಿಸಿದ್ದ ನ್ಯಾಯವಾದಿ ನಂದಿನಿ.ಬಿ. ಶೆಟ್ಟಿ ಮಾತನಾಡಿ ಮಹಿಳೆಯರಿಗೆ ಯಾವುದೇ ತೊಂದರೆಯಾದರೆ ಭಯಪಡಬೇಕಾಗಿಲ್ಲ ಎಂತಹದ್ದೇ ಪರಿಸ್ಥಿತಿ ಎದುರಾದರು ಕಾನೂನಿನ ನೆರವಿನ ಮೂಲಕ ಧೈರ್ಯವಾಗಿ ಎದುರಿಸಿ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಜ್ಯೋತಿ ಹೆಬ್ಬಾರ್ ಹಾಗೂ ಮುಖ್ಯ ಅತಿಥಿಗಳಾಗಿದ್ದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ ರಾವ್ ಅವರು ಸಂದರ್ಬೋಚಿತವಾಗಿ ಮಾತನಾಡಿದರು.

ಹಿರಿಯ ಕಾಂಗ್ರೆಸ್ ನಾಯಕಿ ಶ್ರೀಮತಿ ಸುಮತಿ ಕಲ್ಲೋಟ್ಟೆ, ಸಮಾಜ ಸೇವಕಿ ಆಯೆಶಾ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಕುಮಾರಿ ದ್ರುವಿ, ಶಿಕ್ಷಣ ಕ್ಷೇತ್ರದ ಸಾಧಕಿ ಜೋಯ್ಲಿಯಾ ಡಿ.ಸೋಜ ಇವರಿಗೆ ವೇದಿಕೆಯಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ಮೊದಲು ನಡೆದ ಆಟೋಟ ಸ್ಪರ್ಧೆಯ ವಿಜೇತ ತಂಡಗಳಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಶ್ರೀಮತಿ ಮಾಲಿನಿ ರೈ, ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಭಾನು ಬಾಸ್ಕರ್ ಪುಜಾರಿ, ಕಾರ್ಕಳ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ರೀನಾ ಡಿಸೋಜ, ನಗರ ಕಾಂಗ್ರೆಸ್ ಅಧ್ಯಕ್ಷರಾದ ರಾಜೇಂದ್ರ ದೇವಾಡಿಗ ಉಪಸ್ಥಿತರಿದ್ದರು. ಪುರಸಭಾ ಸದಸ್ಯೆ ನಳಿನಿ‌ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಪ್ರಿಯಾ ರಾಜೇಂದ್ರ ಪ್ರಸಾದ್ ವಂದನಾರ್ಪಣೆಗೈದರು.

LEAVE A REPLY

Please enter your comment!
Please enter your name here