Home ತಾಜಾ ಸುದ್ದಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ..!

ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ..!

0

ಪೊಲೀಸ್ ಇಲಾಖೆಯ ಅಧಿಕಾರಿಗಳು ‌ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ ಸ್ಪಷ್ಟ ಸೂಚನೆ ನೀಡಿದ್ದಾರೆ.ಶ್ರವಣ ಬೆಳಗೊಳದ ಶಾಸಕ ಬಾಲಕೃಷ್ಣ ಸಿಎನ್ ಅವರ ಪ್ರಶ್ನೆಗೆ ಸಚಿವ ಡಾ. ಜಿ ಪರಮೇಶ್ವರ್​ ಉತ್ತರ ನೀಡಿದ್ದಾರೆ.ರಾಜ್ಯದ ಪೊಲೀಸ್​ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿದೆಯೇ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ‌ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಉತ್ತರಿಸಿದ್ದಾರೆ.
ಇದೇ ವೇಳೆ ಅವರು ಹಾಗಿದ್ದಲ್ಲಿ, ಸ್ವಂತ ವಾಹನಗಳ ಮೇಲೆ ಪೊಲೀಸ್​ ಎಂದು ಬರೆಸಿಕೊಂಡು ಕೆಲ ಪೊಲೀಸ್​ ನೌಕರರು ಮತ್ತು ಅಧಿಕಾರಿಗಳು ಕಾನೂನಿನ ಉಲ್ಲಂಘನೆ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಬಂದಿದ್ದಲ್ಲಿ, ಇವರ ವಿರುದ್ಧ ಸರ್ಕಾರವು ತೆಗೆದುಕೊಂಡಿರುವ ಕ್ರಮಗೇಳನು? ಎಂದು ಕೇಳಿದ್ದಾರೆ.

ಅದಕ್ಕೆ ಪರಮೇಶ್ವರ್‌, ತಮ್ಮ ಸ್ವಂತ ವಾಹನಗಳ ಮೇಲೆ ಪೊಲೀಸ್ ಎಂದು ಬರೆಯಿಸಿಕೊಂಡಿರುವುದು ಗೃಹ ಇಲಾಖೆಯ ಗಮನಕ್ಕೆ ಬಂದಿದೆ. ಸ್ವಂತ ವಾಹನದ ಮೇಲೆ ಪೊಲೀಸ್ ಅಧಿಕಾರಿಗಳು ಹಾಗೂ ನೌಕರರು ಪೊಲೀಸ್ ಎಂದು ಬರೆಸಿದ್ದರೇ ಅವರ ವಿರುದ್ಧ 2022 ರ ಸರ್ಕಾರದ ಸುತ್ತೋಲೆ ಪ್ರಕಾರ ಕಾನೂನು ಕ್ರಮ ಆಗುತ್ತದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here