Home ಕರಾವಳಿ ಬಾಲಕಿ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ

ಬಾಲಕಿ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ

0

ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಪ್ರಾಂತ್ಯ ಗ್ರಾಮದಲ್ಲಿ ಮನೆ ಸಮೀಪದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಿರುವ ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪಿಯನ್ನು ಮಂಗಳವಾರ ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಪ್ರಾಂತ್ಯ ಅಜಂಕಲ್ಲುವಿನ ಪ್ರಕಾಶ್ ಎಂಬಾತ ತನ್ನ ಮನೆಯ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಬಾಲಕಿಯ ಮನೆಗೆ ಯಾರೂ ಇಲ್ಲದಾಗ ಕಳೆದ ಒಂದು ವರ್ಷದಿಂದ ಬರುತ್ತಿದ್ದು ಈ ಸಂದರ್ಭ ಸಂತ್ರಸ್ತೆ ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಸಂತ್ರಸ್ತೆಯ ಹೆತ್ತವರು ಮೂಡುಬಿದಿರೆ ಠಾಣೆಗೆ ದೂರು ನೀಡಿದ್ದರು.

ಪ್ರಕರಣದ ಆರೋಪಿ‌ ಪ್ರಾಂತ್ಯ ಗ್ರಾಮದ ಅಜಂಕಲ್ಲುವಿನ ನಿವಾಸಿ ಪ್ರಕಾಶ್ (57) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ದ ಪೊಕ್ಸೋ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here