
ಉಡುಪಿ : ನಡುರಸ್ತೆಗೆ ಬಂದ ದನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಕಾರೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಉಡುಪಿಯ ಹೊಸೂರು ಗ್ರಾಮದ ಕುರ್ಪಾಡಿ ಬಸ್ ನಿಲ್ದಾಣದ ಬಳಿ ನಡೆದಿದೆ.



ಶ್ರೀಕಾಂತ್ ಆಚಾರ್ಯ(38) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಾ.12 ರ ಮಧ್ಯಾಹ್ನ ವೇಳೆ ಹೆಬ್ರಿ ಕಡೆಯಿಂದ ಬರುತ್ತಿದ್ದ ಕಾರಿಗೆ ದನವೊಂದು ಒಮ್ಮೆಲೇ ಅಡ್ಡ ಬಂತು. ಆ ದನಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಕಾರನ್ನು ರಸ್ತೆಯ ಎಡ ಬದಿಯ ಮಣ್ಣು ರಸ್ತೆಗೆ ಚಲಾಯಿಸಿದ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.


ಇದರಿಂದ ಗಂಭೀರ ಗಾಯಗೊಂಡ ಶ್ರೀಕಾಂತ್ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಾ.13ರಂದು ಮೃತಪಟ್ಟಿದ್ದಾರೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.