ಮಂಗಳೂರು : ಬೈಕೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಮೃತಪಟ್ಟ ಘಟನೆ ಮುಲ್ಕಿ ತಾಲೂಕಿನ ಕಿನ್ನಿಗೋಳಿ ಸಮೀಪ ನಡೆದಿದೆ.



ಮೂಲತಃ ಧಾರವಾಡ ಜಿಲ್ಲೆ ಸವದತ್ತಿ ಕಲ್ಲೂರು ನಿವಾಸಿಗಳಾದ ಆತ್ಮಾನಂದ (27), ನವೀನ್ ಹೂಗಾರ (26) ಮೃತ ದುರ್ದೈವಿಗಳು.


ವೇಗವಾಗಿ ಬಂದ ಬೈಕ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಕುರಿತು ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.