Home ಕರಾವಳಿ ಮಂಗಳೂರು: ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಪ್ರವಾಸಿಗ ಸಾವು

ಮಂಗಳೂರು: ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಪ್ರವಾಸಿಗ ಸಾವು

0

ಮಂಗಳೂರು : ಪ್ರವಾಸಿಯೊಬ್ಬರು ನಗರದ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಮಡಿಕೇರಿಯ ಕುಶಾಲನಗರದ ಪ್ರವಾಸಿ ನಿಶಾಂತ್ ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಆಗಿ ಈಜುಕೊಳದಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.

ನಿಶಾಂತ್ ಕುಶಾಲನಗರದಲ್ಲಿ ಮೊಬೈಲ್ ಗ್ಯಾಲರಿ ಶಾಪ್ ಮಾಲೀಕರಾಗಿದ್ದರು. ಪ್ರವಾಸಕ್ಕೆಂದು ಮಂಗಳೂರಿಗೆ ಸ್ನೇಹಿತನ ಜೊತೆ ಬಂದ ಸಂದರ್ಭ ದುರ್ಘಟನೆ ಸಂಭವಿಸಿದೆ. ನೀರಿಗೆ ಹಾರಿದ ನಂತರ ನಿಶಾಂತ್ ಕೈ ಕಾಲು ಆಡಿಸದ ಕಾರಣ ಸ್ನೇಹಿತ ಹಾಗೂ ಇತರರು ಮೇಲಕ್ಕೆತ್ತಿದ್ದರು.

ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್​ನಲ್ಲಿ ಮೂವರು ಯುವತಿಯರು ಈಜುಕೊಳದಲ್ಲಿ ಮೃತಪಟ್ಟ ಘಟನೆ ಕಳೆದ ನವೆಂಬರ್​​ನಲ್ಲಿ ಸಂಭವಿಸಿತ್ತು.

LEAVE A REPLY

Please enter your comment!
Please enter your name here