Home ಕರಾವಳಿ ಮಂಗಳೂರು: ಹಿಂದೂ ಕಾರ್ಯಕರ್ತರ ಭರ್ಜರಿ ಬೇಟೆ..! ಅಕ್ರಮ ಗೋಸಾಗಾಟ, 25 ಗೋವುಗಳ ರಕ್ಷಣೆ..!

ಮಂಗಳೂರು: ಹಿಂದೂ ಕಾರ್ಯಕರ್ತರ ಭರ್ಜರಿ ಬೇಟೆ..! ಅಕ್ರಮ ಗೋಸಾಗಾಟ, 25 ಗೋವುಗಳ ರಕ್ಷಣೆ..!

0

ಮಂಗಳೂರು: ಮಂಗಳೂರಿನಲ್ಲಿ ಅಕ್ರಮ ಗೋಸಾಗಾಟ ರಾಜಾರೋಷವಾಗಿ ನಡೆಯುತ್ತಿದೆ. ಮತ್ತೆ ಭಜರಂಗದಳ ಕಾರ್ಯಕರ್ತರು ಅದನ್ನು ತಡೆದು ಗೋವುಗಳನ್ನು ರಕ್ಷಣೆ ಮಾಡಿರುವ ಘಟನೆ ನಗರದ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಇಂದು ನಡೆದಿದೆ.

ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಗೂಡ್ಸ್ ವಾಹನದಲ್ಲಿ ಕಾಲುಗಳನ್ನು ಕಟ್ಟಿ ಅಮಾನುಷವಾಗಿ 25 ಗೋವುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.

ಘಟನೆ ವೇಳೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕೂಡಲೇ ವಾಹನದಲ್ಲಿದ್ದ ಗೋವುಗಳನ್ನು ರಕ್ಷಣೆ ಮಾಡಿದ ಕಾರ್ಯಕರ್ತರು ವಾಹನವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here