Home ಕರಾವಳಿ ಬಂಟ್ವಾಳ: ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಅತಿಮಹಾರುದ್ರ ಪಾರಾಯಣ- ಮೇ 4 ರಂದು ಅತಿರುದ್ರ ಮಹಾಯಾಗ

ಬಂಟ್ವಾಳ: ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಅತಿಮಹಾರುದ್ರ ಪಾರಾಯಣ- ಮೇ 4 ರಂದು ಅತಿರುದ್ರ ಮಹಾಯಾಗ

0

ಮೊಗರ್ನಾಡು ಸಾವಿರ ಸೀಮೆಯ ಒಡೆಯ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ವಠಾರದಲ್ಲಿ ಲೋಕಕಲ್ಯಾಣರ್ಥವಾಗಿ ಜರಗಲಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ  ಶ್ರೀ ದೇವರಿಗೆ ಅತಿಮಹಾರುದ್ರ ಪಾರಾಯಣ ನಡೆಯಿತು.

ಪ್ರತಿನಿತ್ಯ ಶ್ರೀ ಕ್ಷೇತ್ರದಲ್ಲಿ ಈ ಪಾರಾಯಣ ಮೇ 4 ರಂದು ನಡೆಯುವ ಯಾಗದವರೆಗೂ ನಡೆಯಲಿದೆ. ಶ್ರೀ ಕ್ಷೇತ್ರದಲ್ಲಿ ನಿತ್ಯ ಅನ್ನದಾನವೂ ನಡೆಯುತ್ತದೆ.

ವಾರಾಣಾಸಿ ಕಾಶಿಮಠ ಶ್ರೀಮದ್ ಕಾಶಿಜ್ಞಾನ ಸಿಂಹಾಸನಾದೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ಲೋಕ ಕಲ್ಯಾಣಾರ್ಥ ಈ ಯಾಗ ನಡೆಯಲಿದೆ.

ಚಿತ್ರದುರ್ಗದ ಬಹ್ಮಾನಂದ ರೆಡ್ಡಿ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಇಂದಿನ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ರುಕ್ಮಯ ಪೂಜಾರಿ ದೀಪ ಬೆಳಗಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಕಾರ್ಯಧ್ಯಕ್ಷರಾದ ಜಗನ್ನಾಥ ಚೌಟ ಬದಿಗುಡ್ಡೆ, ಮಾಣಿ ಇತರ ಗಣ್ಯರು ಹಾಗೂ ಕ್ಷೇತ್ರದ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here