ಉಡುಪಿ : ರಸ್ತೆಯಲ್ಲಿ ನಡೆದುಕೊಂಡು ಹೋದ ಮಹಿಳೆಯೋರ್ವಳಿಗೆ ಬೈಕ್ ಸವಾರ ಡಿಕ್ಕಿಹೊಡೆದು, ಸ್ಥಳದಲ್ಲೇ ಮೃತ ಪಟ್ಟ ಘಟನೆ ನಡೆದಿದೆ.



ಮೃತ ಮಹಿಳೆ ಮೇರಿವಾಜ್ ಮಿಯಾರು ನಿವಾಸಿಯಾಗಿದ್ದು ರಸ್ತೆ ಬದಿ ನಡೆದುಕೊಂಡು ಬರುತ್ತಿರುವಾಗಲೇ ಹಿ೦ಬದಿಯಿ೦ದ ವೇಗವಾಗಿ ಬಂದ ಬೈಕ್ ಸವಾರ ಸಂತೋಷ್ ಎಂಬವರು ಮಹಿಳೆಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.


ಡಿಕ್ಕಿ ರಭಸಕ್ಕೆ ಮಹಿಳೆ ಕೆಲ ದೂರ ಹೋಗಿ ಬಿದ್ದಿದ್ದು ಅಪಘಾತದ ಭೀಕರತೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಸಂತೋಷ್ ಕೂಡ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ಭೀಕರತೆ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.