Home ತಾಜಾ ಸುದ್ದಿ ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ

ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ

0

ನವದೆಹಲಿ : ಸಂಸತ್‌ನಲ್ಲಿ ತೀವ್ರ ಚರ್ಚೆಗೆ ಒಳಪಟ್ಟು, ಉಭಯ ಸದನಗಳು ಅಂಗೀಕರಿಸಿದ್ದ ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕುವ ಮುನ್ನ ವಕ್ಫ್ ಮಸೂದೆಯನ್ನು ಎರಡೂ ಸದನಗಳು ಅಂಗೀಕರಿಸಿದ್ದವು. ಸಂಸತ್ತು ಅಂಗೀಕರಿಸಿದ ವಕ್ಫ್ ತಿದ್ದುಪಡಿ ಕಾಯ್ದೆಗೆ ಏಪ್ರಿಲ್ 5 ರಂದು ರಾಷ್ಟ್ರಪತಿಗಳ ಒಪ್ಪಿಗೆ ದೊರೆತಿದೆ.

ಶುಕ್ರವಾರ ಬೆಳಗ್ಗೆ ರಾಜ್ಯಸಭೆಯಲ್ಲಿ 14 ಗಂಟೆಗಳ ಕಾಲ ಈ ಮಸೂದೆ ಬಗ್ಗೆ ಚರ್ಚೆ ನಡೆದ ಬಳಿಕ, ಮಸೂದೆಗೆ 128 ಸದಸ್ಯರು ಪರವಾಗಿ ಮತ್ತು 95 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು. ಇದಕ್ಕೂ ಮೊದಲು, ಗುರುವಾರ ಮುಂಜಾನೆ ಲೋಕಸಭೆಯಲ್ಲಿ 12 ಗಂಟೆಗಳ ಕಾಲ ಈ ಮಸೂದೆ ಬಗ್ಗೆ ಚರ್ಚೆ ನಡೆದು, 288 ಮತಗಳು ಪರವಾಗಿ ಮತ್ತು 232 ಮತಗಳು ವಿರುದ್ಧವಾಗಿ ಚಲಾವಣೆಯಾಗಿದ್ದವು. ಈ ರೀತಿಯಾಗಿ, ಉಭಯ ಸದನಗಳಲ್ಲಿ ಬಹುಮತದೊಂದಿಗೆ ಮಸೂದೆ ಅಂಗೀಕಾರವಾಗಿ ರಾಷ್ಟ್ರಪತಿಗಳ ಒಪ್ಪಿಗೆಗೆ ರವಾನೆಯಾಗಿತ್ತು.

ಪರ ವಿರೋಧಗಳ ನಡುವೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ರಾತ್ರಿ ವಕ್ಫ್ ತಿದ್ದುಪಡಿ ಮಸೂದೆಗೆ ಅಂಕಿತ ಹಾಕಿದ್ದಾರೆ. ರಾಷ್ಟ್ರಪತಿಗಳ ಅಂಕಿತ ಬೀಳುತ್ತಿದ್ದಂತೆ ವಕ್ಫ್ ತಿದ್ದುಪಡಿ ಮಸೂದೆ 2025 ಈಗ ಕಾನೂನಾಗಿ ಮಾರ್ಪಟ್ಟಿದೆ.

LEAVE A REPLY

Please enter your comment!
Please enter your name here