Home ಕರಾವಳಿ ಸುಳ್ಯ: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಯುವಕರ ತಂಡದಿಂದ ಹುಚ್ಚಾಟ -ಪ್ರಕರಣ ದಾಖಲು

ಸುಳ್ಯ: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಯುವಕರ ತಂಡದಿಂದ ಹುಚ್ಚಾಟ -ಪ್ರಕರಣ ದಾಖಲು

0
ಸುಳ್ಯ:ಸಮೀಪ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಯುವಕರ ತಂಡ ಹುಚ್ಚಾಟ ಮೆರೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.
ಈ ಘಟನೆ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಸಂಭವಿಸಿದೆ ಎಂದು ತಿಳಿಯಲಾಗಿದೆ.
ಸಂಪಾಜೆ ಭಾಗದಿಂದ ಸುಳ್ಯದತ್ತ ವೇಗವಾಗಿ ಚಲಿಸುತ್ತಿರುವ ಕಾರಿನ ಮೇಲ್ಭಾಗ ತೆರೆದು ಆ ಭಾಗದಿಂದ ಇಬ್ಬರು ಯುವಕರು ಮೇಲೆ ಬಂದ್ದಿದ್ದು, ಇಬ್ಬರು ಹಿಂದಿ ಸೀಟಿನ ಎಡ ಹಾಗೂ ಬಲ ಬದಿಯ ಡೋರ್ ಭಾಗದಿಂದ ಮೇಲೆ ಬಂದಿದ್ದು, ಇಬ್ಬರು ಮುಂದಿನ ಎಡರೂ ಡೋರ್‌ನ ಡ್ರೈವರ್ ಸೈಡ್ ಭಾಗದಿಂದಲೂ ಮೇಲೆದ್ದು ನಿಂತು ಹುಚ್ಚಾಟ ಮೆರೆಯುತ್ತಿರುವುದು ವಿಡಿಯೋದಲ್ಲಿದೆ. ಯುವಕರ ಕೃತ್ಯವನ್ನು ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದವರು ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ವಿಡಿಯೋ ಇದೀಗ ಎಲ್ಲಾ ಕಡೆ ವೈರಲ್ ಆಗಿದೆ.
ಪೊಲೀಸರು ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here