ಮಂಗಳೂರು: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಎಸ್ ಕೆ ಎಸ್ ಜಂಕ್ಷನ್ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.



ಮೃತರನ್ನು ಕೇರಳ ಮೂಲದ ಸಂಕೀರ್ತ್ (ಚಾಲಕ) ಹಾಗೂ ಧನುರ್ವೇದ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಸಿಬಿ ಸ್ಯಾಮ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಪೊಲೀಸರ ಪ್ರಕಾರ, ಇಂದು ಬೆಳಗಿನ ಜಾವ ಸಂಕೀರ್ತ್ ಅವರು ಮೋಟಾರ್ ಸೈಕಲ್‌ನಲ್ಲಿ ಧನುರ್ವೇದ್ ಮತ್ತು ಸಿಬಿ ಸ್ಯಾಮ್ ಅವರೊಂದಿಗೆ ಪಂಪ್ವೆಲ್ ಕಡೆಗೆ ತೆರಳುತ್ತಿದ್ದರು. ಈ ವೇಳೆ ಎಸ್ ಕೆ ಎಸ್ ಜಂಕ್ಷನ್‌ನ ತೆರೆದ ಡಿವೈಡರ್‌ಗೆ ಮೋಟಾರ್ ಸೈಕಲ್ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಮೋಟಾರ್ ಸೈಕಲ್‌ನಿಂದ ಮೂವರು ರಸ್ತೆಗೆ ಬಿದ್ದಿದ್ದು, ಸಂಕೀರ್ತ್ ಮತ್ತು ಧನುರ್ವೇದ್ ಅವರ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯದಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಬಿ ಸ್ಯಾಮ್ ಅವರಿಗೆ ಸಣ್ಣ ಗಾಯಗಳಾಗಿವೆ.
ಈ ಕುರಿತು ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಗಾಯಗೊಂಡಿರುವ ಸಿಬಿ ಸ್ಯಾಮ್ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.