ಉಡುಪಿ: ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಮೂರು ತಿಂಗಳ ಅಂತರದಲ್ಲಿ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಲಾದ ಒಟ್ಟು 27 ಮೊಬೈಲ್‌ಗಳನ್ನು ವಾರೀಸುದಾರರಿಗೆ ಹಸ್ತಾಂತರಿಸಲಾಯಿತು.



ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕೆಎಸ್‌ಪಿ ಆ್ಯಪ್ ಮೂಲಕ ಮೊಬೈಲ್ ಕಾಣೆಯಾದ ದೂರುಗಳನ್ನು ಸ್ವೀಕರಿಸಿದ್ದು, ನಂತರ ಆ ಮೊಬೈಲ್ ಗಳನ್ನು ಸಿಇಐಆರ್ ಪೋರ್ಟಲ್ ಅಪ್ಲಿಕೇಷನ್ ಅಡಿಯಲ್ಲಿ ಬ್ಲಾಕ್ ಮಾಡಲಾಗಿತ್ತು. 2025ನೇ ಸಾಲಿನಲ್ಲಿ ಸಿಇಐಆರ್ ಪೋರ್ಟಲ್ ಮೂಲಕ ಒಟ್ಟು 32 ಮೊಬೈಲ್‌ಗಳನ್ನು ಪತ್ತೆಹಚ್ಚಲಾಗಿದೆ. ಈ ಮೊಬೈಲ್‌ಗಳ ಒಟ್ಟು ಮೌಲ್ಯ 4.5ಲಕ್ಷ ರೂ. ಎಂದು ಅಂದಾಜಿಸಲಾಗಿದೆ.


ಇದರಲ್ಲಿ ಸುಮಾರು 5 ಮೊಬೈಲ್‌ಗಳನ್ನು ಈಗಾಗಲೇ ವಾರೀಸುದಾರರಿಗೆ ಹಸ್ತಾಂತರಿಸಲಾಗಿದೆ. ಉಳಿದ 27 ಮೊಬೈಲ್‌ಗಳನ್ನು ಬುಧವಾರ ವಾರೀಸು ದಾರರಿಗೆ ಉಡುಪಿ ನಗರ ಠಾಣೆಯಲ್ಲಿ ಉಡುಪಿ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ. ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಪೊಲೀಸ್ ಠಾಣಾ ನಿರೀಕ್ಷಕ ಮಂಜುನಾಥ ವಿ.ಬಡಿಗೇರ್ ಹಾಗೂ ಪೊಲೀಸ್ ಉಪನಿರೀಕ್ಷಕರುಗಳಾದ ಪುನೀತ್ ಕುಮಾರ್ ಬಿ.ಈ., ಈರಣ್ಯ ಶಿರಗುಂಪಿ, ಭರತೇಶ್ ಕಂಕಣವಾಡಿ ಮತ್ತು ಗೋಪಾಲಕೃಷ್ಣ, ಜೋಗಿ ಹಾಜರಿದ್ದರು.