ಪುತ್ತೂರು: ನಗರದ ದರ್ಬೆ ಬಳಿ ಕಾರ್ಯನಿರ್ವಹಿಸುತ್ತಿದ್ದ ಆಶೀರ್ವಾದ್ ಫರ್ನಿಚರ್ ಮಳಿಗೆಯಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ.



ಬೆಂಕಿಯ ಕಿನ್ನಾಲಿಗೆಗೆ ಮಳಿಗೆಯಲ್ಲಿದ್ದ ಪೀಠೋಪಕರಣಗಳು ಹಾನಿಯಾಗಿದೆ. ಬೆಳಿಗ್ಗೆ ಹೊಗೆ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.


ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.
ಬೆಂಕಿ ಅನಾಹುತದಿಂದಾದ ಹಾನಿಯ ಬಗ್ಗೆ ನಿಖರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.