Home ಕರಾವಳಿ ರೈಲ್ವೆ ಕಾಮಗಾರಿ ಹಿನ್ನೆಲೆ: ಬೆಂಗಳೂರು-ಮಂಗಳೂರು ರೈಲುಗಳು 5 ತಿಂಗಳು ಸಂಚಾರ ಸಂಪೂರ್ಣ ಸ್ಥಗಿತ

ರೈಲ್ವೆ ಕಾಮಗಾರಿ ಹಿನ್ನೆಲೆ: ಬೆಂಗಳೂರು-ಮಂಗಳೂರು ರೈಲುಗಳು 5 ತಿಂಗಳು ಸಂಚಾರ ಸಂಪೂರ್ಣ ಸ್ಥಗಿತ

0

ರೈಲ್ವೆ ಕಾಮಗಾರಿ ಹಿನ್ನೆಲೆ ಬೆಂಗಳೂರು – ಮಂಗಳೂರು, ಬೆಂಗಳೂರು – ಕಾರವಾರ ನಡುವೆ ಸಂಚಾರ ನಡೆಸುತ್ತಿದ್ದ 6 ರೈಲುಗಳು ಮುಂದಿನ 5 ತಿಂಗಳು ಸಂಪೂರ್ಣ ರದ್ದಾಗುತ್ತಿವೆ ಎಂದು ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಮಂಗಳೂರು – ಬೆಂಗಳೂರು ಮಾರ್ಗದಲ್ಲಿ ರದ್ದಾಗುವ ರೈಲುಗಳು ಈ ಕೆಳಗಿನಂತಿವೆ:ಮೇ 31 ರಿಂದ ನವೆಂಬರ್ 1 ರವರೆಗೆ ಶನಿವಾರಗಳಂದು ಸಂಚರಿಸುವ ಯಶವಂತಪುರ – ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16539) ರದ್ದು.ಜೂನ್ 1 ರಿಂದ ನವೆಂಬರ್ 2 ರವರೆಗೆ ಭಾನುವಾರಗಳಂದು ಸಂಚರಿಸುವ ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16540) ರದ್ದು.ಜೂನ್ 1 ರಿಂದ ಅಕ್ಟೋಬರ್ 30 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರಗಳಂದು ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16575) ರದ್ದು.ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರಗಳಂದು ಸಂಚರಿಸುವ ಮಂಗಳೂರು-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16576) ರದ್ದು.ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರಗಳಂದು ಸಂಚರಿಸುವ ಯಶವಂತಪುರ-ಕಾರವಾರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16515) ರದ್ದು.ಜೂನ್ 3 ರಿಂದ ನವೆಂಬರ್ 1 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರಗಳಂದು ಸಂಚರಿಸುವ ಕಾರವಾರ-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16516) ರೈಲು ರದ್ದು.

LEAVE A REPLY

Please enter your comment!
Please enter your name here